ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಚಿವ ದೇಶಪಾಂಡೆ ಪ್ರತಿಕೃತಿ ದಹನ

Vishwanath S
Updated On : 19 Dec 2013, 1:03 am

ಚಿಂತಾಮಣಿ: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರದೊಂದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ 2006 ರ ಸಿಇಟಿ ಕಾಯ್ದೆಯನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿರೋಧಿಸಿ ಶಿಕ್ಷಣ ಸಚಿವ ದೇಶಪಾಂಡೆ ಭೂತ ದಹನ ಮಾಡಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಚಿಂತಾಮಣಿ ನಗರದ ವಿವಿಧ ಮುಖ್ಯ ರಸ್ತೆಗಳಲ್ಲಿ ನೂರಾರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ದುರ್ಬಲ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಲು ವಿಫಲವಾಗುವ ಮತ್ತು ಅವರ ಶೈಕ್ಷಣಿಕ ಹಕ್ಕನ್ನು ಮೊಟಕುಗೊಳಿಸುವ ಸರ್ಕಾರದ ಈ ನೀತಿ ವಿದ್ಯಾರ್ಥಿ ಹಾಗೂ ಶೈಕ್ಷಣಿಕ ವಿರೋಧಿ ನೀತಿಯಾಗಿದೆ ಎಂದು ದೂರಿದರು.
ತನ್ನ ಪಾಲಿನ ಸೀಟುಗಳಿಗಾಗಿ ಕಾಮೆಡ್ ನಡೆಸುವ ಪ್ರದೇಶ ಪರೀಕ್ಷೆಯ ಬಗೆ ಈಗಾಗಲೇ ಹಲವಾರು ದೂರುಗಳಿದ್ದು ಅಂತಹದರಲ್ಲಿ ಸರ್ಕಾರ ಉಳಿದ ಸೀಟು(ಸರ್ಕಾರಿ)ಗಳಿಗೂ ಪರೀಕ್ಷೆ ನಡೆಸಲು ಕಾಮೆಡ್ ಬಿಟ್ಟು ಕೊಡುತ್ತಿರುವುದು ಖಂಡನೀಯ.
ಅಲ್ಲದೆ ಇದರಿಂದ ಖಾಸಗಿ ಸಂಸ್ಥೆಗಳಿಗೆ ಬೇಕಾಬಿಟ್ಟಿ ಶುಲ್ಕ ವಸೂಲಿ ಮಾಡಲು ಅನುಕೂಲವಾಗುತ್ತದೆ. ಇದನ್ನು ತಡೆಯಲೆಂದೇ 2006 ರ ಕಾಯ್ದೆ ಜಾರಿಗೆ ತರುತ್ತಿರುವುದಾಗಿ ಸರ್ಕಾರ ಹೇಳುತ್ತಿದ್ದರೂ ಪರಿಣಾಮ ವ್ಯತಿರಿಕ್ತವಾಗಿಯೇ ಆಗುತ್ತದೆ. ಖಾಸಗಿ ವೈದ್ಯಕೀಯ ದಂತೆ ಇಂಜಿನಿಯರಿಂಗ್,ಯೂನಾನಿ,ಆಯುರ್ವೇಧ,ಯೋಗ,ನ್ಯಾಚುರೋಪತಿ ಕಾಲೇಜುಗಳಲ್ಲಿಯ ಸರ್ಕಾರಿ ಸೀಟುಗಳಿಗೆ ಪ್ರವೇಶ ಶುಲ್ಕ ಕುರಿತಂತೆ ಸರ್ಕಾರದ ಪೂರ್ವ ನಿಯಂತ್ರಣ ತಪ್ಪಿ ಖಾಸಗಿ ಆಡಳಿತ ಮಂಡಳಿಗಳಿಗೆ ಪರಮಾಧಿಕಾರ ಕೊಟ್ಟಂತಾಗುತ್ತದೆ. ಆದರೆ ಇತರೆ ರಾಜ್ಯಗಳ ವಿದ್ಯಾರ್ಥಿಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾಮೆಡ್ಕೆ ಪ್ರವೇಶ ಬರೆಯುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಸ್ಪರ್ಧೆ ಹೆಚ್ಚಾಗಿ ಅವರು ಸೀಟು ವಂಚಿತರಾಗಿದ್ದಾರೆಂದು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ನಂತರ ತಾಲೂಕು ದಂಡಾಧಿಕಾರಿ ಕೆ.ಟಿ.ಕೃಷ್ಣಸ್ವಾಮಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಎಬಿವಿಪಿ ಮುಖಂಡ ಮಂಜುನಾಥರೆಡ್ಡಿ,ಸುರೇಶ್,ನವಾಜ್,ಅಶ್ವಿನಿ,ಲಾವಣ್ಯ,ಶ್ವೇತ,ಸೌಮ್ಯ, ಆಯುಷ,ಸುಪ್ರಿಯಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement