ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನಾನಾ ಕಾರ್ಯಕ್ರಮಕ್ಕೆ ಕಾಲೇಜು ಬಳಕೆ: ಪೋಷಕರ ಬೇಸರ

Srinivasa Murthy VN
Updated On : 20 Dec 2013, 12:08 pm

ಮಾಲೂರು: ವ್ಯಾಸಂಗಕ್ಕೆ ತೊಂದರೆ ಬರುವಂತಹ ರೀತಿಯಲ್ಲಿ ತಾಲೂಕಿನ ವಿವಿಧ ಸರ್ಕಾರಿ ಇಲಾಖೆಗಳು ತಮ್ಮ ಇಲಾಖಾ ಕಾರ್ಯಕ್ರಮಗಳಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಆಶ್ರಯಿಸುತ್ತಿರುವುದನ್ನು ವಿದ್ಯಾರ್ಥಿಗಳ ಪೋಷಕರು ಕಟುವಾಗಿ ಟೀಕಿಸುತ್ತಿದ್ದಾರೆ.
ಚುನಾವಣೆ ಮತ ಎಣಿಕೆ, ಸಿಬ್ಬಂದಿಗೆ ತರಬೇತಿ ಆಯೋಜಿಸುವ ತಾಲೂಕು ಆಡಳಿತ ಸೇರಿದಂತೆ ಶಿಕ್ಷಣ ಇಲಾಖೆ ಸಹ ಇಲಾಖೆ ಕಾರ್ಯಕ್ರಮಗಳನ್ನು ಆಗಾಗ್ಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳುತ್ತಿರುವುದರಿಂದ ಇಲ್ಲಿನ ಕಾಲೇಜಿನಲ್ಲಿ ಹೈಸ್ಕೂಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬಹಳ ಅನಾನುಕೂಲವಾಗುತ್ತಿದೆ.
ಇದಕ್ಕೆ ತಾಜಾ ಉದಾಹರಣೆ ಎಂದರೆ ಕಳೆದೆರಡು ದಿನಗಳಿಂದ ಇಲ್ಲಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯಿಂದಲೇ ಅನುಭವಿಸುತ್ತಿರುವ ತೊಂದರೆಗಳು.
ಡಿಸೆಂಬರ್ ತಿಂಗಳ ಪರೀಕ್ಷೆ ನೆಡೆಯುತ್ತಿರುವ ಇಲ್ಲಿನ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕಾಗಿ ಹೈಸ್ಕೂಲ್‌ಗೆ ರಜೆ ಘೋಷಿಸಿ ಪರೀಕ್ಷೆಯನ್ನು ಗುರುವಾರದಿಂದ ಚಾಲನೆಗೊಳಿಸಲು ನಿರ್ಧರಿಸಲಾಗಿತ್ತು.
ತರಬೇತಿ ಕಾರ್ಯಾಗಾರ:  ಆದರೆ ಗುರುವಾರ ದಿಢೀರಣೆ ಅಕ್ಷರ ದಾಸೋಹ ಇಲಾಖೆಯವರು ಶಿಕ್ಷಣ ಇಲಾಖೆಯ ಸಹಕಾರದೂಂದಿಗೆ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ 500ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳಿಗಾಗಿ ಆರೋಗ್ಯ ತಪಾಸಣೆ ಹಾಗೂ ತರಬೇತಿ ಕಾರ್ಯಾಗಾರವನ್ನು ಶಾಲಾ ಕೊಠಡಿಗಳಲ್ಲಿ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳನ್ನು ಶಾಲೆಯ ಹೊರಗೆ ಬಿಸಲಿನಲ್ಲಿ ಕುಳಿತು ಪರೀಕ್ಷೆ ಬರೆಯುವಂತಾಯಿತು.
ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ನಿರಂತರ ತೊಂದರೆ ನೀಡುವ ರೀತಿಯಲ್ಲಿ ಇಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಬಿಇಓ ರವರ ಕಾರ್ಯ ವೈಖರಿಯನ್ನು ಖಂಡಿಸಿರುವ ಪೋಷಕರು ಕೋಲಾರ ರಸ್ತೆಯಲ್ಲಿರುವ ಡಾ.ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪದವಿ ಪೂರ್ವ ಕಾಲೇಜನ್ನು ಮಕ್ಕಳ ವ್ಯಾಸಂಗಕ್ಕಾಗಿ ಮೀಸಲಿಡಬೇಕೆಂದು ಬಿಇಓ ರವರನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಕನ್ನಡ ಪ್ರಭಕ್ಕೆ ಪ್ರತಿಕ್ರಿಯಿಸಿರುವ ತಹಸೀಲ್ದಾರ್ ಡಾ.ಸುಧಾ ಪಾಯ್ಸ್ ರವರು ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಕರೆಯಿಸಿ ಮುಂದೆ ಬರುವ ಎಲ್ಲ ಕಾರ್ಯಕ್ರಮ,ಸಮಾರಂಭವನ್ನು ಕಾಲೇಜಿನಲ್ಲಿ ಆಯೋಜಿಸದೆ ಡಾ.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳುವಂತೆ ತಿಳಿಸಲಾಗುವುದು ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement