'ಮಕ್ಕಳ ರಕ್ಷಣೆ: ಸೇವಾ ಸಂಸ್ಥೆಗಳ ಪಾತ್ರ ಮುಖ್ಯ'
ಕೋಲಾರ: ಮಕ್ಕಳ ರಕ್ಷಣೆ ಮತ್ತು ಪೋಷಣೆ ಕಾರ್ಯದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೋಲಾರ ಶಾಖೆ ಸದಾ ಸಿದ್ಧವಾಗಿರುತ್ತದೆ ಅದೇ ರೀತಿ ಮಕ್ಕಳ ರಕ್ಷಣೆಯ ವಿಚಾರದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಹೆಚ್ಚಿನ ಕಾಳಜಿ ವಹಿಸಿ ಕೆಲಸ ನಿರ್ವಹಿಸಬೇಕಾಗಿದೆ ಎಂದು ಜಿಲ್ಲಾ ಮಕ್ಕಳ ಸಾಂಸ್ಥಿಕ ರಕ್ಷಣಾಧಿಕಾರಿ ಜಗದೀಶ್ ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆದರ್ಶ ಕಾಲೇಜು ಕೋಲಾರ ಸಂಯುಕ್ತಾಶ್ರಯದಲ್ಲಿ ಆದರ್ಶ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳ ರಕ್ಷಣೆ ಮತ್ತು ಪೋಷಣೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪಾತ್ರ, ಕಾರ್ಯವೈಖರಿ, ಮಕ್ಕಳಿಗೆ ಇರುವ ಸಮಸ್ಯೆಗಳು ಮಕ್ಕಳು ಸಮಸ್ಯಯಿಂದ ಹೊರಬರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಇರುವ ಸೌಲಭ್ಯಗಳಾದ ಪ್ರಾಯೋಜಕತ್ವ ಕಾರ್ಯಕ್ರಮ, ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ವಿವರಿಸಿದರು.
ಆದರ್ಶ ಕಾಲೇಜು ಪ್ರಾಂಶುಪಾಲ ಕೆ.ಆರ್.ಲಾಂ ಉದ್ಘಾಟಿಸಿದರು. ಕಾಲೇಜಿನ ಅಧ್ಯಕ್ಷೆ ಮಂಜುಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪರಿವೀಕ್ಷಣಾಧಿಕಾರಿ ಅನಿತಾ,ಜಿಲ್ಲಾ ಸಂಯೋಜಕ ಭಗವನ್ ಗುರು,ಪರೀವಿಕ್ಷಣಾಧಿಕಾರಿ ಮಹೇಶ್ಬಾಬು, ರೂಪಾರಾಣಿ ಇದ್ದರು.