ಅಪಘಾತ; ಬೈಕ್ ಸವಾರ ಸಾವು
ಚಿಂತಾಮಣಿ: ನಾಯಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿ ಹಿಂಬದಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರ ಗೇಟ್ಬಳಿ ನಡೆದಿದೆ.
ನಗರದಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ವ್ಯಾಪಾರ ಮಾಡುತ್ತಿದ್ದ ಮಾನ್ಸಿಂಗ್(28) ಮತ್ತು ಈತನ ಸ್ನೇಹಿತ ಮಹೇಂದರ್ಸಿಂಗ್ ರಾಂಪುರ ಗೇಟ್ಬಳಿ ಬೈಕಿನಲ್ಲಿ ಬರುತ್ತಿದ್ದಾಗ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ಆಯಾ ತಪ್ಪಿ ಕೆಳಗೆ ಬಿದ್ದ ಮಾನ್ಸಿಂಗ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತಿದ್ದ ಮಹೇಂದ್ರನಿಗೆ ಗಂಭೀರ ಗಾಯಗಳಾಗಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಾಂತರ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಘವೇಂದ್ರ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಣ್ಣಿನ ಉಚಿತ ತಪಾಸಣೆ
ಬಾಗೇಪಲ್ಲಿ: ಆರೋಗ್ಯವೇ ಮಹಾಭಾಗ್ಯ, ಉತ್ತಮ ಆರೋಗ್ಯವಂತ ಜನರೇ ದೇಶದ ಸಂಪತ್ತು ಎಂದು ಬಾಗೇಪಲ್ಲಿ ಚಿತ್ರಾವತಿ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸರೆಡ್ಡಿ ತಿಳಿಸಿದರು. ಪಟ್ಟಣದ ಬಿಂದು ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಕಣ್ಣಿನ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಮತ್ತು ಮಧುಮೇಹಿಗಳ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರದಲ್ಲಿ ಅವರು ಮಾತನಾಡಿದರು. ಡಾ.ರಮೇಶ್, ಎ. ಆನಂದ್, ಪ್ರಕಾಶ್, ಬಾಬು, ಶ್ರೀನಿವಾಸರೆಡ್ಡಿ ಇದ್ದರು.