ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರೈತರ ಬೆಳೆಗೆ ರೈತರೇ ಬೆಲೆ ನಿಗದಿ ಮಾಡಬೇಕು

Rashmi Kasaragodu
Updated On : 25 Dec 2013, 2:17 am

ಬಂಗಾರಪೇಟೆ: ದೇಶದ ಅಭಿವೃದ್ಧಿಯಲ್ಲಿ ರೈತರ ಪಾತ್ರ ಪ್ರಮುಖವಾದದ್ದು ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಮತ್ತು ಕೃಷಿ ಮಾಹಿತಿ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರು ಬೆಳೆದ ಯಾವುದೇ ಬೆಳೆಗೆ ಅವರೇ ಬೆಲೆ ನಿಗದಿಪಡಿಸುವ ಕಾನೂನು ಈವರೆಗೂ ಜಾರಿಯಾಗಿಲ್ಲ. ರೈತರು ಬೆಳೆದ ಬೆಳೆಯನ್ನು ದಾಸ್ತಾನು ಮಾಡಿಕೊಂಡು ಸೂಕ್ತ ಸಮಯದಲ್ಲಿ ಅವರೇ ಬೆಲೆ ನಿಗದಿ ಪಡಿಸುವ ಕಾಲ ಸನ್ನಿಹಿತವಾಗಲಿದೆ ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್ ಮಾತನಾಡಿ, ಭಾರತ ಅಮೆರಿಕ ದೇಶಕ್ಕಿಂತಲೂ ಕೃಷಿಯಲ್ಲಿ ಮುನ್ನಡೆ ಸಾದಿಸಿದೆ ಎಂದರು. ಇದೇ ವೇಳೆ ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಪ್ರದರ್ಶನ ಮತ್ತು ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಜಿಪಂ ಸದಸ್ಯ ಆ.ಮು. ಲಕ್ಷ್ಮಿನಾರಾಯಣ, ರಾಜಾರೆಡ್ಡಿ ಡಾ. ಪ್ರೇಮಲತ ಮಾತನಾಡಿದರು.
ಬರಗಾಲದಲ್ಲಿಯೂ ಕೃಷಿಯಲ್ಲಿ ಸಾಧನೆ ಮಾಡಿರುವ ಹಲವು ರೈತರನ್ನು ಸತ್ಕರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement