ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಲ್ಪಸಂಖ್ಯಾತರು ಬಿಜೆಪಿ ತಿರಸ್ಕರಿಸಲು ಮನವಿ

Mainashree
Updated On : 26 Dec 2013, 12:15 pm

ಶಿಡ್ಲಘಟ್ಟ: ಜಾತಿ-ಜಾತಿಗಳ ಹಾಗೂ ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವ ನರೇಂದ್ರಮೋದಿಯವರು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿದ್ದು, ಅಲ್ಪಸಂಖ್ಯಾತರು ಜಾಗೃತರಾಗಿ ಮತಚಲಾಯಿಸಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ವಿ. ಮುನಿಯಪ್ಪ ಹೇಳಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ನಡೆದ ತಾಲೂಕು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೊಳಿಸಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್ ಹಾಗೂ ಮಾಜಿ ಸಚಿವ ವಿ. ಮುನಿಯಪ್ಪರನ್ನು ವಿಧಾನ ಪರಿಷತ್ತಿನ ಸದಸ್ಯರನ್ನಾಗಿಸಿ ಸಚಿವ ಸಂಪುಟದಲ್ಲಿ ಪ್ರಾತಿನಿದ್ಯ ನೀಡಬೇಕೆಂದು ನಿರ್ಣಯ ಅಂಗೀಕರಿಸಲಾಯಿತು. ಕೋಚಿಮುಲ್ ಅಧ್ಯಕ್ಷ ಕೆ. ಗುಡಿಯಪ್ಪ, ಜಿಪಂ ಸದಸ್ಯ ಎಸ್.ಎಂ. ನಾರಾಯಣಸ್ವಾಮಿ, ಎನ್. ಮುನಿಯಪ್ಪ, ಸನಾಉಲ್ಲಾ, ಸಾಧಿಕತ್ ಪಾಷ,ಅಬ್ದುಲ್ ಗಫೂರ್, ಫಿದಾಹುಸೇನ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement