ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಿಕ್ಷಕರ ಬೇಡಿಕೆಗಳಿಗೆ ಸಚಿವ ಕಿಮ್ಮನೆ ರತ್ನಾಕರ ಸ್ಪಂದನೆ

Rashmi Kasaragodu
Updated On : 27 Dec 2013, 2:07 am

ಕ.ಪ್ರ.ವಾರ್ತೆ   ಕೋಲಾರ   ಡಿ.26
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು ಶೀಘ್ರದಲ್ಲಿ ಈಡೇರಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಭರವಸೆ ನೀಡಿದ್ದಾರೆಂದು ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆರ್. ಶ್ರೀನಿವಾಸ್ ತಿಳಿಸಿದ್ದಾರೆ.
ಬೆಂಗಳೂರಿನ ಸರ್ವಶಿಕ್ಷಣ ಅಭಿಯಾನ ಸಭಾಂಗಣದಲ್ಲಿ ಗುರುವಾರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ಸಚಿವರು ಮಾತನಾಡಿ, ಪ್ರಾಥಮಿಕ ಶಾಲಾ ಬಡ್ತಿ ಮುಖ್ಯ ಶಿಕ್ಷಕರ ವೇತನ ಶ್ರೇಣಿ ಹಾಗೂ ಕಾಲೇಜು ಪ್ರಾಶುಂಪಾಲರ ವೇತನ ಶ್ರೇಣಿಗಳಲ್ಲಿ ವ್ಯತ್ಯಾಸಗಳಿದ್ದು ಅವುಗಳನ್ನು ಸರ್ಕಾರದ ಮಟ್ಟದಲ್ಲಿ ಬಗೆಹರಿಸಲಾಗುವುದೆಂದು ನಮ್ಮ ಮನವಿಗೆ ಸ್ಪಂದಿಸಿದರೆಂದು ತಿಳಿಸಿದ್ದಾರೆ.
8ನೇ ತರಗತಿ ಉನ್ನತೀಕರಿಸಿದ ಶಾಲೆಗಳಿಗೆ ಪದವಿಧರೇತರ ಮುಖ್ಯ ಶಿಕ್ಷಕರ ನೇಮಕ  ಹಾಗೂ ವಿಶೇಷ ಭತ್ಯೆ ನೀಡಬೇಕು, 30 ದಿನಗಳ ಗಳಿಕೆ ರಜೆ, ಸಿ.ಆರ್.ಪಿ ಮತ್ತು ಬಿ.ಆರ್.ಪಿ ಹುದ್ದೆಗಳನ್ನು ಬಡ್ತಿ ಮುಖ್ಯ ಶಿಕ್ಷಕರಿಗಾಗಿ ನೀಡುವುದು.ರಾಜ್ಯದ ಎಲ್ಲಾ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಬಡ್ತಿ ಮುಖ್ಯ ಶಿಕ್ಷಕರ ಹುದ್ದೆ ತುಂಬುವುದು. ಡಿ.ದರ್ಜೆ ನೌಕರರನ್ನು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಿವುದು ಮುಂತಾದ ಬೇಡಿಕೆಗಳನ್ನು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಬೇಡಿಕೆಗಳನ್ನು ಇಲಾಖಾ ಮಟ್ಟ ಮತ್ತು ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಬೇರ್ಪಡಿಸಿ ಕಳುಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿ ರಾಜಕುಮರ್ ಕತ್ರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮಹಮದ್ ಮೊಹಸಿನ್, ಪ್ರಾಥಮಿಕ ಶಿಕ್ಷಣ ನಿರ್ದೇಶಕ ಕೆ. ಆನಂದ್, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎ. ದೇವಪ್ರಕಾಶ್, ಮುಖ್ಯ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಎಲ್. ಅಶ್ವಥಯ್ಯ, ಉಪಾಧ್ಯಕ್ಷ ಲಲ್ಯನಾಯಕ್, ಖಜಾಂಚಿ ಚಂದ್ರಶೇಖರ್ ಹಾಗೂ ತಾವು ಭಾಗವಹಿಸಿದ್ದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement