ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಗೌರಿಬಿದನೂರು: 28 ರಂದು ಒಕ್ಕಲಿಗ ನೌಕರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಯಕಾರಿ ಸಮಿತಿ ಪ್ರಧಾನ ಕಾರ್ಯದರ್ಶಿ ಆರ.ಜಿ. ಜನಾರ್ದನ ಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ತಿಳಿದ್ದಾರೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಬ್ಲಿಕ್ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಪಡೆದ ಜಿಲ್ಲೆಯ ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಶಾಸಕರಿಗೆ ಮತ್ತು ಆದಿಚುಂಚನ ಗಿರಿ ಮಹಾ ಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮಿಯವರ ಸಾನ್ನಿಧ್ಯದಲ್ಲಿ ಎನ್.ಎಚ್. ಶಿವಶಂಕರರೆಡ್ಡಿ ಅವರಿಗೆ ಡಾ.ಕೆ. ಸುಧಾಕರ್, ಎಸ್.ಎನ್. ಸುಬ್ಬಾರೆಡ್ಡಿ, ಎಂ. ಕೃಷ್ಣಾರೆಡ್ಡಿ, ಎಂ. ರಾಜಣ್ಣ, ವೈ.ಎ. ನಾರಾಯಣಸ್ವಾಮಿಯವರಿಗೆ ಸನ್ಮಾನ ಮಾಡಲಾಗುವುದು.
ಕಾರ್ಯಕ್ರಮಕ್ಕೆ ಯಲುವಳ್ಳಿ ರಮೇಶ್, ಬಿ.ಆರ್.ನಾರಾಯಣಸ್ವಾಮಿ ಆಗಮಿಸಲಿದ್ದು, 29ರಂದು ಪಟ್ಟಣದ ಸುಮಂಗಲಿ ಕಲ್ಯಾಣ ಮಂಟಪದಲ್ಲಿ ಹಿರಿಯ ಅಧಿಕಾರಿಗಳನ್ನು ಒಗ್ಗೂಡಿಸಿ ಬಡ ಮಕ್ಕಳನ್ನು ಪತ್ತೆಹಚ್ಚಲು ಕುಂದುಕೊರತೆ ಸಭೆಯೂ ನಡೆಯಲಿದೆ. ಗೋಷ್ಠಿಯಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿ ಸಹಕಾರ್ಯದರ್ಶಿ ರಾಮಕೃಷ್ಣಾರೆಡ್ಡಿ, ಗೌರಿಬಿದನೂರು ತಾಲೂಕು ಅಧ್ಯಕ್ಷ ರಾಘವೇಂದ್ರ ರೆಡ್ಡಿ, ಕಾರ್ಯದರ್ಶಿ ರಾಮಕೃಷ್ಣ, ಖಜಾಂಚಿ ಮಂಜುನಾಥರೆಡ್ಡಿ ಇದ್ದರು.