ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲಿ'

Mainashree
Updated On : 27 Dec 2013, 11:21 am

ಮಾಲೂರು: ಸಮುದಾಯದ ಮಕ್ಕಳಿಗೆ ಶಿಕ್ಷಣದಲ್ಲಿ ಉತ್ತೇಜನ ನೀಡಲು ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಯಾದವ ನೌಕರರ ಸಂಘದ ಅಧ್ಯಕ್ಷ ಎಂ. ನಟರಾಜ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಸಾಮುದಾಯದ ಅಭಿವೃದ್ಧಿ ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಸಾಧ್ಯವಿರುವುದರಿಂದ ಶೈಕ್ಷಣಿಕವಾಗಿ ಉತ್ತೇಜಿಸಲು ಪ್ರತಿಭಾ ಪುರಸ್ಕಾರ ಹಾಗೂ ಸಾಧನೆಗೈದ ವ್ಯಕ್ತಿಗಳನ್ನು ಗೌರವಿಸಲಾಗುವುದು ಎಂದರು. ಭಾನುವಾರ ಪಟ್ಟಣದ ಪದ್ಮಾವತಿ ಸಂಕೀರ್ಣದಲ್ಲಿ ಈ ಬಾರಿಯ ಯಾದವ ಜನಾಂಗದ ಸರ್ಕಾರಿ ನೌಕರರ ಸಂಘದ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದರು. ಸಮುದಾಯದ ರಾಜ್ಯಾಧ್ಯಕ್ಷ ಶ್ರೀನಿವಾಸ್, ಬೆಂಗಳೂರು ವಿಶ್ವವಿದ್ಯಾಲಯದ ಪ್ರೊ. ಮುನಿನಾರಾಯಣ್, ಗೋವಿಂದಪ್ಪ, ಎಂ.ವಿ. ವೆಂಕಟಸ್ವಾಮಿ ಭಾಗವಹಿಸಲಿದ್ದು, ತಾಪಂ ಅಧ್ಯಕ್ಷರಾಗಿರುವ ಸಮುದಾಯದ ಪುಟ್ಟಸ್ವಾಮಿ ಅವರನ್ನು ಅಭಿನಂದಿಸಲಾಗುತ್ತದೆ ಎಂದರು. ತಾಪಂ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಜನಾಂಗ ಅಸಂಘಟಿತವಾಗಿದ್ದು, ಎಲ್ಲರನ್ನು ಒಂದಡೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸಂಘದ ಕಾರ್ಯದರ್ಶಿ ಸಂಜೀವಪ್ಪ, ಜಯರಾಮಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement