ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರಕ್ತದಾನದಿಂದ ಅಪಾಯವಿಲ್ಲ

Rashmi Kasaragodu
Updated On : 29 Dec 2013, 1:42 am

ಟೇಕಲ್; ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ ಹಾಗೂ ನೆನಪಿನ ಶಕ್ತಿ ಹೆಚ್ಚಾಗುತ್ತದೆ ಎಂದು ತೊರಲಕ್ಕಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಿ. ಮಂಜುನಾಥ್ ತಿಳಿಸಿದರು. ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಕೆಜಿಎಫ್ ಸಾರ್ವಜನಿಕ ಆಸ್ಪತ್ರೆ  ಹಾಗೂ ತೊರಲಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, 18 ರಿಂದ 60 ವರ್ಷದೊಳಗಿನ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು ಇದರಿಂದ ಯಾವುದೇ ಕೆಟ್ಟ ಪರಿಣಾಮಗಳಾವುದಿಲ್ಲ ಎಂದು ತಿಳಿಸಿದರು. ನೂಟವೆ ಗ್ರಾಪಂ ಪಿಡಿಒ ಕೃಷ್ಣಪ್ಪ, ಸದಸ್ಯ ವಜೀದ್, ಅಣ್ಣಯ್ಯ, ನಾಗರಾಜ್, ಮುನಿಯಪ್ಪ, ವೀರಣ್ಣ, ಡಾ. ಮಾಲತಿ ಇದ್ದರು.  ಶಿಬಿರದಲ್ಲಿ ವೈದ್ಯ ಡಾ. ಮಂಜುನಾಥ್, ಆರೋಗ್ಯ ಇಲಾಖೆಯ ಪ್ರಶಾಂತ್ ಮುಂತಾದವರು ರಕ್ತದಾನ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement