ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದು ರಾಷ್ಟ್ರಕವಿಗೆ ನಮನ ಕಾರ್ಯಕ್ರಮ

Rashmi Kasaragodu
Updated On : 30 Dec 2013, 2:47 am

ಕೋಲಾರ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆ ಅಂಗವಾಗಿ ಕುವೆಂಪು ನಮನ ಚುಟುಕು ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗರದ ದೇವರಾಜ್ ಅರಸ್ ವೈದ್ಯಕೀಯ ಮಹಾವಿದ್ಯಾಲಯದ ಎ.ವಿ. ಹಾಲ್ನಲ್ಲಿ ಡಿ.30 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗಣೇಶ್, ಉದ್ಘಾಟಿಸಲಿದ್ದು, ಕುವೆಂಪು ಭಾವಚಿತ್ರಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜೆ.ಜಿ. ನಾಗರಾಜ್ ಪುಷ್ಪಾಂಜಲಿ ಅರ್ಪಿಸಲಿದ್ದಾರೆ.
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ದೇವರಾಜ್ ಅರಸ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಬಿ. ಸಾಣಿಕೊಪ್ಪ ಭಾಗವಹಿಸುತ್ತಾರೆ. ಇದೇ ಸಂದರ್ಭದಲ್ಲಿ ಜನ್ನಘಟ್ಟ ಕೃಷ್ಣಮೂರ್ತಿ ತಂಡದಿಂದ ಜಾನಪದ ಗೀತಗಾಯನ, ಚೌಡಮ್ಮ ತಂಡದಿಂದ ಕೋಲಾಟ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಕವಿಗಳಿಂದ ಚುಟುಕು ಕವಿಗೋಷ್ಠಿ ನಡೆಯಲಿದೆ ಎಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪಿ.ನಾರಾಯಣಪ್ಪ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement