ನೇಣು ಹಾಕಿಕೊಂಡು ಮಹಿಳೆ ಸಾವು
ಕೆಜಿಎಫ್: ಬ್ರೈನ್ ಟ್ಯೂಮರ್ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಂ.ಎಲ್. ಬ್ಲಾಕ್ ನಿವಾಸಿ ಸೆಲ್ವರಾಜ್ ಎಂಬುವರ ತಂಗಿ ಮುರುಗವೇಣಿ(40) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.
ಇವರು ಸುಮಾರು ವರ್ಷಗಳಿಂದ ಬ್ರೈನ್ ಟ್ಯೂಮರ್ ಖಾಯಿಲೆಯಿಂದ ಬಳಲುತ್ತಿದ್ದು ಬೆಂಗಳೂರಿನ ಸಾಯಿಬಾಬ ಆಸ್ಪತ್ರೆ ಸೇರಿದಂತೆ ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡ ಮುರುಗವೇಣಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉರಿಗಾಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.