ಮನೆಗೊಂದು ಶೌಚಾಲಯ ನಿರ್ಮಿಸಿ
ಚಿಂತಾಮಣಿ: ಕಡ್ಡಾಯವಾಗಿ ಮನೆಗೊಂದು ಶೌಚಾಲಯ ನಿರ್ಮಿಸಿ ನೈರ್ಮಲ್ಯ ಕಾಪಾಡಲು ಮುಂದಾಗಬೇಕೆಂದು ಭೂಮಿಶೆಟ್ಟಿಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್. ಲಕ್ಷ್ಮಿನಾರಾಯಣ ಕರೆ ನೀಡಿದರು.
ತಾಲೂಕಿನ ಭೂಮಿಶೆಟ್ಟಿಹಳ್ಳಿ ಗ್ರಾಪಂ ಆವರಣದಲ್ಲಿ 2013-14 ನೇ ಸಾಲಿನ ಗ್ರಾಮ ಸಭೆ ಮತ್ತು ವಾರ್ಡ್ ಸಭೆಯಲ್ಲಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ಪ್ರತಿ ಹಳ್ಳಿಯಲ್ಲಿಯೂ ಶೌಚಾಲಯ ನಿರ್ಮಿಸಲು ಸಹಾಯಧನ ನೀಡುತ್ತಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಗ್ರಾಪಂ ಮಾಜಿ ಅಧ್ಯಕ್ಷ ಕಾಪ್ಪಲ್ಲಿ ಶ್ರೀನಿವಾಸ್ ಮಾತನಾಡಿದರು.
ಗ್ರಾಪಂ ಅಧ್ಯಕ್ಷೆ ಗೈರು: ಭೂಮಿಶೆಟ್ಟಹಳ್ಳಿ ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳು ಸೇರಿ ಬಸವ ಕಲ್ಯಾಣ ಯೋಜನೆಯ ಮನೆಗಳನ್ನು ವಿತರಿಸಲು ಅಧ್ಯಕ್ಷರ ಹೆಸರು ನಕಲಿ ಸಹಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಅಧ್ಯಕ್ಷರು ಸಭೆ ಬಹಿಷ್ಕರಿಸಿರುವುದಾಗಿ ತಿಳಿದು ಬಂದಿದೆ. ಪಂಚಾಯ್ತಿಯಲ್ಲಿ ಹಾಲಿ ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕ ಪಕ್ಷೀಯವಾಗಿ ನಡೆದುಕೊಳ್ಳುತ್ತಿರುವ ಅಧಿಕಾರಿ ಹಲವು ಸದಸ್ಯರ ಕಾರ್ಯವೈಖರಿ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.
ಉಪಾಧ್ಯಕ್ಷ ಲಕ್ಷ್ಮಣರೆಡ್ಡಿ, ಪ್ರಸಾದ್, ಕೃಷ್ಣಾರೆಡ್ಡಿ, ಸುನಂದಮ್ಮ, ವೆಂಕಟೇಶ್, ಶಂಕರಪ್ಪ, ಲಕ್ಷಣರೆಡ್ಡಿ ಇದ್ದರು.