ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪದಾಧಿಕಾರಿಗಳ ಆಯ್ಕೆ

Rashmi Kasaragodu
Updated On : 31 Dec 2013, 2:10 am

ಚಿಂತಾಮಣಿ: ತಾಲ್ಲೂಕಿನ ಮುರುಗಮಲ್ಲ ಗ್ರಾಮದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಹೋಬಳಿ ಪದಾಧಿಕಾರಿಗಳ ಆಯ್ಕೆಯ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಗೆ ಜಿಲ್ಲಾಧ್ಯಕ್ಷ ಎಂ.ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದು ಈ ಕೆಳಕಂಡ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆಯೆಂದು ಸಂಘಟನೆಯ ಪ್ರಕಟಣೆ ತಿಳಿಸಿದೆ. ಹೋಬಳಿ ಅಧ್ಯಕ್ಷರಾಗಿ ಕೆ.ರಾಜು, ಮುದ್ದಲಹಳ್ಳಿ ಉಪಾಧ್ಯಕ್ಷರಾಗಿ ಡಿ.ವಿ.ರಾಜಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹಯ್ಯ, ಸಹ ಕಾರ್ಯದರ್ಶಿ ಲಕ್ಷ್ಮಯ್ಯ, ಸಂಘಟನಾ ಕಾರ್ಯದರ್ಶಿ ಮುನಿರಾಜು, ಖಜಾಂಚಿ ವಿಶ್ವನಾಥ್, ಗೌರವಾಧ್ಯಕ್ಷ ಕದಿರಪ್ಪ, ಜಂಟಿ ಕಾರ್ಯದರ್ಶಿ ವೆಂಕಟೇಶ್, ಕಾರ್ಯಾಧ್ಯಕ್ಷರು ವೈ.ವಿ.ಶಿವಣ್ಣ, ವೆಂಕಟರವಣಪ್ಪ, ಶೋಭ, ಉಪಾಧ್ಯಕ್ಷೆ ಸರಸ್ವತಮ್ಮ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಆರ್.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ರಂಗಪ್ಪ, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಆಂಜಪ್ಪ, ಗೌರವಾಧ್ಯಕ್ಷ ಸೋಮಶೇಖರ್, ಸುರೇಶ್, ಸಿ.ಎನ್.ನಾರಾಯಣಸ್ವಾಮಿ, ಚಿಲಕಲನೇರ್ಪು ಹೋಬಳಿ ಅಧ್ಯಕ್ಷ ವೆಂಕಟಸ್ವಾಮಿ, ಪ್ರಧಾನ ಕಾರ್ಯದರ್ಶಿ ವೆಂಕಟರವಣಪ್ಪ, ಮುಂಗಾನಹಳ್ಳಿ ಹೋಬಳಿ ಗೌರವಾಧ್ಯಕ್ಷ ಶ್ರೀರಾಮಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement