ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ಬಂಗಾರಪೇಟೆ; ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ ಕೊರತೆಯಿಂದ ಜನರು ಪರದಾಡುತ್ತಿದ್ದರೂ ಸಂಬಂಧಪಟ್ಟವರು ನಿರ್ಲಕ್ಷ್ಯ ತಾಳಿರುವುದನ್ನು ಖಂಡಿಸಿ ದಲಿತ ಸಮಾಜ ಸೇನೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿದರು.
ಗ್ರಾಮೀಣ ಸಾರಿಗೆ ಇಲ್ಲದ ಕಾರಣ ಜನರು ಆಟೋಗಳಲ್ಲಿ ಸಂಚರಿಸುವಂತಾಗಿದೆ. ಇದರಲ್ಲಿ ನಿಗದಿತ ಸಂಖ್ಯೆಗಿಂತಲೂ ಅಧಿಕ ಪ್ರಯಾಣಿಕರನ್ನು ತುಂಬಿಸುವುದರಿಂದ ಅಪಘಾತಗಳು ಹೆಚ್ಚಾಗಿದೆ ಎಂದು ಆರೋಪಿಸಿದರು.
ಈ ಭಾಗದಲ್ಲಿ ಸಂಚರಿಸುವ ಬಹುತೇಕ ಖಾಸಗಿ ಬಸ್ಗಳಿಗೆ ಪರ್ಮಿಟ್ ಇಲ್ಲ. ಇದು ತಿಳಿದಿದ್ದರೂ ಆರ್ಟಿಒ ಅಧಿಕಾರಿಗಳು ತಪಾಸಣೆ ಮಾಡುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಹಾಗೂ ಕೆಂಪು ಬಸ್ಗಳ ಓಡಾಟಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಶಾಸಕ ಎಸ್.ಎನ್.ನ ಾರಾಯಣಸ್ವಾಮಿ, ಕೊರತೆಯಿರುವ ಕಡೆ ಕೆಂಪು ಬಸ್ ಸಂಚಾರಕ್ಕೆ ಸೂಚಿಸುವುದಾಗಿ ಹೇಳಿ ಪ್ರತಿಭಟನೆ ಕೈಬಿಡುವಂತೆ ಮನವೊಲಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಸೂಲಿಕುಂಟೆ ಆನಂದ್, ಹುಣಸನಹಳ್ಳಿ ರಮೇಶ್,ದೇವಗಾನಹಳ್ಳಿ ಯತೀಶ್ ಇದ್ದರು.