ಕಾಂಗ್ರೆಸ್‌ನಿಂದ ನಾಳೆ ಆರೋಗ್ಯ ಶಿಬಿರ
ಮಾಲೂರು: ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿನ ಜನತೆ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ತಾಲೂಕಿನ ಟೇಕಲ್‌ನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಹಿರಿಯ ವಕೀಲ ಕೆ.ಎಚ್. ಸೋಮಶೇಖರ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳ ಕುಗ್ರಾಮಗಳ ಜನತೆ ಹಿತದೃಷ್ಟಿಯಿಂದ ತಾಲೂಕಿನಲ್ಲಿ ಈಗಾಗಲೇ ಮಾಲೂರು ಪಟ್ಟಣ ಹಾಗೂ ಮಾಸ್ತಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, 10 ಸಾವಿರಕ್ಕೂ ಹೆಚ್ಚು ಬಡ ಜನತೆಯ ಶಿಬಿರದ ಉಪಯೋಗ ಪಡೆದುಕೊಂಡು ಯಶಸ್ವಿಯಾಗಿದೆ. ಈಗ ಟೇಕಲ್‌ನಲ್ಲಿ ಫೆ.3ರಂದು ಬೃಹತ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎದಂರು.
ಶಿಬಿರಕ್ಕೆ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಚಾಲನೆ ನೀಡಲಿದ್ದಾರೆ. ಕಳೆದೆರಡು ಶಿಬಿರಗಳಿಂದ 60 ಮಂದಿಗೆ ಕಣ್ಣಿನ ಅಪರೇಷನ್ ಉಚಿತವಾಗಿ ಮಾಡಲಾಗಿದೆ. 5000 ಕನ್ನಡಕ ವಿತರಿಸಲಾಗಿದೆ. ಈ ಬಾರಿ ಬೆಂಗಳೂರಿನ ಎಂ.ಎಸ್. ರಾಮಯ್ಯ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ನಾರಾಯಣ ಹೃದಯಾಲದ ವೈದ್ಯರು ಭಾಗವಹಿಸಲಿದ್ದಾರೆ. ಅವಶ್ಯವಿದ್ದರೆ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗೂ ಉಚಿತವಾಗಿ ಏರ್ಪಾಡು ಮಾಡಲಾಗುವುದು. ಟೇಕಲ್ ಭಾಗದ ಜನರು ಶಿಬಿರ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು, ಚೆನ್ನರಾಯಪ್ಪ, ಕೆಪಿಸಿಸಿ ಸದಸ್ಯ ರಘುನಾಥ್ ಮಾತನಾಡಿದರು. ಕಾಂಗ್ರೆಸ್ ಉಪಾಧ್ಯಕ್ಷ ರಾಜಗೋಪಾಲ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್, ಬೀಡಿ ಮಂಜುನಾಥ್, ಕೃಷ್ಣಾ ರೆಡ್ಡಿ, ಸುಬ್ರಮಣಿ ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.