ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಾಡಾನೆ ಹಾವಳಿಗೆ ಭಯ ಬೇಡ: ನಾರಾಯಣಸ್ವಾಮಿ

Parashurama
Updated On : 1 Feb 2013, 10:57 am

ಬಂಗಾರಪೇಟೆ: ಆನೆಗಳನ್ನು ತಮಿಳುನಾಡಿನ ಕಾಡಿಗೆ ಓಡಿಸಲು ಎಲ್ಲ ಕ್ರಮ ಸರ್ಕಾರ ಕೈಗೊಳ್ಳಲಾಗಿದೆ ಎಂದು ಶಾಸಕ ಎಂ.ನಾರಾಯಣಸ್ವಾಮಿ ಹೇಳಿದರು.
ತೊಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಆರೋಗ್ಯ ಕೇಂದ್ರ ಉದ್ಘಾಟನೆ ವೇಳೆ ಆನೆಗಳ ಹಾವಳಿಯಿಂದ ಆಗುತ್ತಿರುವ ಸಾವು-ನೋವು ಮತ್ತು ಹಾನಿಗಳ ಬಗ್ಗೆ ಗ್ರಾಮಸ್ಥರು ಗಮನ ಸೆಳೆದಾಗ, ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರಲ್ಲಿ ಚರ್ಚಿಸಲಾಗಿದೆ. ಮೃತ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಕೊಡಬೇಕೆಂದು ಹಾಗೂ ಬೆಳೆ ಹಾನಿ ರೈತರಿಗೂ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದರಿಂದಾಗಿ ಸರ್ಕಾರ ಎಲ್ಲ ಬೇಡಿಕೆಗಳಿಗೂ ಸ್ವಂದಿಸಿದೆ ಎಂದರು.
ಇದೇ ವೇಳೆ ರಾಜ್ಯ ಅರಣ್ಯ ಇಲಾಖೆ ಪ್ರಧಾನ ಸಂರಕ್ಷಣಾಧಿಕಾರಿ ದೀಪಕ್ ಶರ್ಮ ಮತ್ತಿತರ ತಂಡ ತೊಪ್ಪನಹಳ್ಳಿ ಗ್ರಾಮ ಸೇರಿದಂತೆ ಆನೆಗಳಿಂದಾಗಿರು ಹಾನಿ ಅಧ್ಯಯನ ನಡೆಸಲು ಆಗಮಿಸಿತು.
ಇದೇ ಸಂದರ್ಭದಲ್ಲಿ ಆನೆ ತುಳಿತಕ್ಕೆ ಬಲಿಯಾದ ಗುಟ್ಟೂರು ಗ್ರಾಮದ ರೈತ ಚಲಪತಿ ಪತ್ನಿಗೆ 5 ಲಕ್ಷ ಪರಿಹಾರ ಚೆಕ್ ಅನ್ನು ಶಾಸಕರು ವಿತರಿಸಿದರು. ಉಳಿದ ಇಬ್ಬರಿಗೂ ಅತಿ ಶೀಘ್ರದಲ್ಲಿ ಪರಿಹಾರ ನೀಡಲಾಗುವುದಾಗಿ ಹೇಳಿದರು.
ಈ ವೇಳೆ ಶಾಸಕರು ಗ್ರಾಮಸ್ಥರ ಪರವಾಗಿ ಕಾಮಸಮುದ್ರ ಸುತ್ತಮುತ್ತಲಿರುವ ಅರಣ್ಯ ಪ್ರದೇಶದಲ್ಲಿ ಕಾಡು ಮೃಗಗಳ ಕಾಟ ಮಿತಿ ಮೀರಿರುವುದರಿಂದ ರೈತರು ಭಯದ ನೆರಳಲ್ಲೆ ಬದುಕುವಂತಾಗಿದೆ. ಆದ್ದರಿಂದ ಈ ಪ್ರದೇಶವನ್ನು ಅಭಯಾರಣ್ಯ ಪ್ರದೇಶವಾಗಿ ಘೋಷಿಸಬೇಕೆಂದು ಮನವಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments