ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೆಡಿಎಸ್ ಕಾರ್ಯಕರ್ತರ ನಾಯಕತ್ವ ಕೊರತೆ ನಿವಾರಿಸಿ

Parashurama
Updated On : 1 Feb 2013, 11:17 am

ಚಿಂತಾಮಣಿ:  ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ. ಹೈಕಮಾಂಡ್ ಕೂಡಲೇ ಸರಿಯಾದ ನಿರ್ಧಾರ ತೆಗೆದುಕೊಂಡು ನಾಯಕತ್ವ ಕೊರತೆ ಬಗೆಹರಿಸಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಕೋಮುಲ್ ನಿರ್ದೇಶಕ ಹಾಗೂ ಹಿರಿಯ ಜೆಡಿಎಸ್ ಮುಖಂಡ ಟಿ.ಎನ್. ರಾಜಗೋಪಾಲ್ ಆಗ್ರಹಿಸಿದ್ದಾರೆ.
ತಾಲೂಕಿನ ತಳಗವಾರ ತಮ್ಮ ಸ್ವಗೃಹದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಂತಾಮಣಿಯ ಸ್ವಗ್ರಾಮದವರಾದ ಮಾಜಿ ಸಿಎಂ ಕುಮಾರಸ್ವಾಮಿ ಧರ್ಮಪತ್ನಿ ಅನಿತಾ ಅವರು ಚಿಂತಾಮಣಿ ವಿಧಾನಸಭಾ ಕ್ರೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದರು.
ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಇಲ್ಲಿನ ಜೆಡಿಎಸ್ ಪಕ್ಷದ ನಾಯಕತ್ವದ ಕೊರತೆಯಿಂದ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ. ಕೂಡಲೇ ಹೈಕಮಾಂಡ್ ಚಿಂತಾಮಣಿಯಲ್ಲಿನ ಜೆಡಿಎಸ್ ಪಕ್ಷದ ಗುಂಪುಗಾರಿಕೆಯನ್ನು ಸರಿಪಡಿಸಲು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ತಾನು ಸಹ ಮುಂದಿನ ವಿಧಾನಸಭಾ ಕ್ಷೇತ್ರದ ವಿದ್ಯಮಾನಗಳನ್ನು ಹಲವು ವರ್ಷಗಳಿಂದ ಗಮನಿಸುತ್ತಿದ್ದೇನೆ ಎಂದೂ ಸಹ ಈ ಕ್ಷೇತ್ರದಲ್ಲಿ ಇಂತಹ ಪರಿಸ್ಥಿತಿ ಎದುರಾಗಿಲ್ಲ. ಕಾರಣ 2 ಕುಟುಂಬಗಳ ನಡುವೆ ಶೀಥಲ  ಸಮರವಿತ್ತೆ ವಿನಃ, ಕ್ಷೇತ್ರದ ಮತದಾರರು ಅಷ್ಟೇ ಪ್ರಾಮಾಣಿಕರಾಗಿ ಒಬ್ಬ ವ್ಯಕ್ತಿಯನ್ನು ಆರಿಸಲು ಮುಂದಾಗುತ್ತಿದ್ದರು. ಆದರೆ, ಈಗಿನ ರಾಜಕೀಯ ಪರಿಸ್ಥಿತಿಯೇ ಬೇರೆ ಇದೆ ಎಂದರು.
ಏನೇ ಆಗಲಿ ಚಿಂತಾಮಣಿಯಲ್ಲಿ ಜೆಡಿಎಸ್ ಗೆಲ್ಲಲು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯೇ ಚಿಂತಾಮಣಿಗೆ ಅನಿತಾ ಕುಮಾರಸ್ವಾಮಿ ಅವರಾಗಲಿ ಅಥವಾ ಕುಮಾರಸ್ವಾಮಿ ಅವರಾಗಲಿ  ಸ್ಪರ್ಧಿಸಿ ಜೆಡಿಎಸ್ ಪಕ್ಷದೊಳಗಿನ ಆಂತರಿಕ ಗುಂಪುಗಾರಿಕೆಯನ್ನು ಸರಿಪಡಿಸಬೇಕೆಂದು ಹೈಕಮಾಂಡ್ ಮೇಲೆ ಟಿ.ಎನ್. ರಾಜಗೋಪಾಲ್ ಒತ್ತಡ ಹೇರಿದ್ದಾರೆ. ಕ್ಷೇತ್ರದಲ್ಲಿ ಇರುವ ಗುಂಪುಗಾರಿಕೆಗಳಲ್ಲಿ ಭಾಗವಹಿಸದೆ ನಾನು ಅಲ್ಲಿಯ ತನಕ ತಟಸ್ಥವಾಗಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments