ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನಾಡ ಕಚೇರಿಯಲ್ಲಿ ಕಂದಾಯ ಇಲಾಖೆ 36 ಸೇವೆ: ನಂಜಯ್ಯ

Parashurama
Updated On : 1 Feb 2013, 10:59 am

ಮುಳಬಾಗಲು:  ಇನ್ನು ಮುಂದಿನ ದಿವಸಗಳಲ್ಲಿ ಯೊವುದೇ ಹೋಬಳಿ ಜನರು ತಾಲ್ಲೂಕು ಕಚೇರಿಗಳೆಗೆ ತಿರುಗುವಂತಿಲ್ಲ, ಇಲಾಖೆಯ ಮೂವತ್ತಾರು ಸೇವೆ ಹೋಬಳಿ ಕೇಂದ್ರದ ನಾಡಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ತಹಸೀಲ್ದಾರ್ ಎಚ್.ನಂಜಯ್ಯ ನುಡಿದರು. ತಾಲೂಕಿನ ಬೈರಕೂರು ಗ್ರಾಮದಲ್ಲಿ ಗುರುವಾರ ಕಂದಾಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಅತ್ಯುತ್ತಮ ಮಾಸಾಚರಣೆ ಕಾರ್ಯಕ್ರಮವನ್ನು ಪ್ರಾರಂಭಿಸಿ ಮಾತನಾಡಿದರು. ಅಪರ ತಹಸೀಲ್ದಾರ್ ಡಿ.ವಿ. ರಾಮಮೂರ್ತಿ ಕಂದಾಯ ಇಲಾಖೆಯ ಸೌಲಭ್ಯಗಳನ್ನು ವಿವರಿಸಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣಾಚಾರಿ. ಸುಬ್ಬಾರೆಡ್ಡಿ, ಸದಸ್ಯ ಶ್ರೀನಿವಾಸ್, ಡೆಪ್ಯೂಟಿ ತಹಸೀಲ್ದಾರ್ ಮರಿಗಂಗಯ್ಯ, ಕಂದಾಯ ನಿರೀಕ್ಷಕ ವೆಂಕಟೇಶ್, ನಾಗರಾಜ ರಾವ್, ರಾಜಾರಾಂ ಇದ್ದರು.
ದಾಸೋಹ ಯೋಜನೆ ನಿರಂತರವಾಗಿರಲಿ
ಗೌರಿಬಿದನೂರು:  ಹಸಿದ ಹೊಟ್ಟೆಗೆ ಅನ್ನ ನೀಡುವುದರಿಂದ ತೃಪ್ತಿ ದೊರೆಯುತ್ತದೆ ಎಂದು ಜೆಡಿಎಸ್ ಮುಖಂಡ ಕೆ. ಜೈಪಾಲ್ ರೆಡ್ಡಿ ತಿಳಿಸಿದರು. ಪಟ್ಟಣದ ಪುರಸಭೆ ಕಚೇರಿ ಮುಂದೆ ಅನ್ನಬ್ರಹ್ಮ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಪಂಚದಲ್ಲಿ ಅನ್ನದಾನ, ವಿದ್ಯಾದಾನಗಳಿಗಿಂತ ಮಿಗಿಲಾದ ದಾನಗಳಿಲ್ಲ. ಕ್ಷೇತ್ರದ ಜನತೆಗೆ ನನ್ನ ಕೈಲಾದಷ್ಟು ನೆರವಾಗಬೇಕು ಉದ್ದೇಶದಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು. ತಾಲೂಕು ಸತತ ಮೂರು ವರ್ಷಗಳಿಂದ ಬರಗಾಲ ಎದುರಿಸುತ್ತಿದೆ. ನಾನಾ ಕೆಲಸಗಳಿಗೆಂದು ತಾಲೂಕು ಕೇಂದ್ರವಾದ ಪಟ್ಟಣಕ್ಕೆ ನಿತ್ಯ ಸಾವಿರಾರು ಜನ ಬರುತ್ತಾರೆ. ಆದರೆ, ಅವರಿಗೆ ಸೂಕ್ತ ಊಟದ ವ್ಯವಸ್ಥೆ ಇರುವುದಿಲ್ಲ.  ಆದ್ದರಿಂದ ದಾಸೋಹ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತಿದೆ. ಇದು ನಿರಂತರವಾಗಿ ಮುಂದುವರಿಯಲಿದೆ ಎಂದರು. ನಿರುದ್ಯೋಗಿಗಳು ಸ್ವಂತ ಬದುಕು ಕಟ್ಟಿಕೊಳ್ಳಲು ನೆರವಾಗುವಂತೆ ಮುಂದಿನ ದಿನಗಳಲ್ಲಿ ತಾಲೂಕಿನ ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗಾಧಾರಿತ ತರಬೇತಿ ಶಿಬಿರಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದರು. ಮುಖಂಡ ಬಾಬುರೆಡ್ಡಿ ಮಾತನಾಡಿ, ಜೈಪಾಲ್ ರೆಡ್ಡಿ ಅವರು 3 ವರ್ಷಗಳಿಂದ ನಾನಾ ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಇಲ್ಲಿನ ಜನತೆಯೆ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೀನ ದಲಿತ, ನಿರುದ್ಯೋಗಿಗಳು ಸೇರಿದಂತೆ ಎಲ್ಲ ವರ್ಗಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಮತ್ತಷ್ಟು ಜನ ಮೆಚ್ಚುಗೆಯ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶ ಹೊಂದಿದ್ದಾರೆ ಎಂದರು. ಮಾಜಿ ಗ್ರಾಪಂ ಅಧ್ಯಕ್ಷ ಶಿವಣ್ಣ, ಸದಸ್ಯ ಅಜಿತ್‌ಕುಮಾರ್, ವಿಜಯರಾಘವರೆಡ್ಡಿ, ಲಕ್ಷ್ಮೀನಾರಾಯಣ್, ನವೀನ್ ರೆಡ್ಡಿ, ನಟೇಶ್, ಪೂಲು ಬಾಬು, ವೆಂಕಟರವಣ ಇತರರು ಹಾಜರಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments