ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರೇಷ್ಮೆ ನಾಡಲ್ಲಿ ಕನ್ನಡ ಚರಿಷ್ಮ...

Parashurama
Updated On : 1 Feb 2013, 11:16 am

ಚಿಕ್ಕಬಳ್ಳಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶುಕ್ರವಾರ ಆಯೋಜಿಸಿದ್ದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿ ನೆರವೇರಿತು.
ನಗರದ ನಂದಿ ರಂಗಮಂದಿರದಲ್ಲಿ ರಾಷ್ಟ್ರಧ್ವಜ, ನಾಡಧ್ವಜ ಮತ್ತು ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿತು. ನಂತರ ಸಮ್ಮೇಳನದ ಅಧ್ಯಕ್ಷ ಗೋಪಾಲಗೌಡ ಕಲ್ವಮಂಜಲಿ ಮತ್ತು ಕನ್ನಡ ತಾಯಿ ಭುವನೇಶ್ವರಿ ಮಾತೆಯ ಮೆರವಣಿಗೆ ನಡೆಯಿತು. ಕುಂಭ ಮೇಳದೊಂದಿಗೆ ಆಶಾ ಕಾರ್ಯಕರ್ತೆಯರು, ಡೊಳ್ಳು ಕುಣಿತ,ಗೊಂಬೆ ಕುಣಿತ ಕಲಾವಿದರು ಇವರ ಜತೆಗೆ ವಿದ್ಯಾರ್ಥಿಗಳು, ಸಾಹಿತಿಗಳು ಜೈಕಾರ ಹಾಕಿದರು.
ನಗರದ ಬಿ.ಬಿ. ರಸ್ತೆ, ಎಂ.ಜಿ. ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಹೊರಟು ಅಂಬೇಡ್ಕರ್ ಭವನಕ್ಕೆ ಆಗಮಿಸಿದರು. ಮೆರವಣಿಗೆಯಲ್ಲಿ ನಾಡಧ್ವಜಗಳು ರಾರಾಜಿಸಿದವು.
ಆಕರ್ಷಕ ಕಾರ್ಯಕ್ರಮ: ನಗರದ ಅಂಬೇಡ್ಕರ್ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆದವು. ಅನನ್ಯ ಕಲಾ ರಂಗವೇದಿಕೆಯ ಗ.ನ.ಅಶ್ವತ್ಥ್ ಅವರು ತಮ್ಮ ಗಾಯನದ ಮೂಲಕ ಕಾರ್ಯಕ್ರಮದಲ್ಲಿದ್ದವರಿಗೆ ರಸದೌತಣ ಉಣಬಡಿಸಿದರು. ಅದೇ ರೀತಿ ಶರಣ್ಯ ರಾಮ್ ಅವರು ಭರತನಾಟ್ಯ ಕಾರ್ಯಕ್ರಮದ ಮೂಲಕ ಗಮನ ಸೆಳೆದರು. ಇನ್ನೂ ಕನ್ನಡ ಸಾಹಿತ್ಯ ಪರಂಪರೆಯ ಬಗ್ಗೆ ಪರಿಚಯ ಮಾಡಿಕೊಡುತ್ತ ಬೆಳವಣಿಗೆಗಳು, ಮಹತ್ವದ ಕುರಿತು ಚಿಕ್ಕಮಗಳೂರಿನ ಖ್ಯಾತ ಸಾಹಿತಿ ಚಟ್ನಹಳ್ಳಿ ಮಹೇಶ್ ಉಪನ್ಯಾಸ ನೀಡಿದರು.
ಒಂದು ಕಡೆ ಮಹಿಳೆಯನ್ನು ಆರಾಧಿಸಲಾಗುತ್ತಿದ್ದರೆ, ಮತ್ತೊಂದೆಡೆ ಮಹಿಳೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಸಮಾಜದಲ್ಲಿ ಮಹಿಳೆಯರು ಹಲವು ಕೊಡುಗೆ ನೀಡುತ್ತಿದ್ದಾರೆ. ಆದರೆ, ಬಹಳಷ್ಟು ಸಾಮಾಜಿಕ ಕಟ್ಟಲೆಗಳು, ಪಿಡುಗುಗಳಿಗೆ ಸಿಲುಕಿ ನಲುಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯ ಸಬಲೀಕರಣಕ್ಕಾಗಿ ಒತ್ತು ಕೊಡಬೇಕು.
ಶೈಕ್ಷಣಿಕತೆ ಜತೆಗೆ ಸಾಮಾಜಿಕವಾಗಿಯೂ, ಎಲ್ಲಾ ರೀತಿಯಲ್ಲೂ ಮಹಿಳೆಯರು ಮುಂದೆ ಬರಬೇಕು. ಇದಕ್ಕೆ ಪ್ರತಿಯೊಬ್ಬರ ಸಹಕಾರ ಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಸುಧಾ ಅವರು ತಮ್ಮ ಮಹಿಳಾ ಸಬಲೀಕರಣ ಉಪನ್ಯಾಸದಲ್ಲಿ ಒತ್ತಿ ಹೇಳಿದರು.
ರಂಜಿಸಿದ ಇಂದುಶ್ರೀ: ಅಂತಾರಾಷ್ಟ್ರೀಯ ಕಲಾವಿದೆ ಇಂದುಶ್ರೀ ಕಾರ್ಯಕ್ರಮದ ಆಕರ್ಷಣೆಯ ಕೇಂದ್ರಬಿಂದುವಾದರು. ಮಾತನಾಡುವ ಬೊಂಬೆ ಕಾರ್ಯಕ್ರಮ ನಡೆಸಿಕೊಡುವ ಮೂಲಕ ನಗೆಗಡಲಿನಲ್ಲಿ ತೇಲಾಡುವಂತೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments