ಉಮೇದುವಾರಿಕೆ ಅರ್ಜಿ ಸಲ್ಲಿಸಲು ಮನವಿ
ಚಿಂತಾಮಣಿ: ಕತ್ತರಿಗುಪ್ಪೆ ಹತ್ತಿ ಕೈಮಗ್ಗ ನೇಯ್ಗೆ ನೇಕಾರರ ಉತ್ಪಾದನೆ ಮತ್ತು ಮಾರಾಟ ಸಹಕಾರ ಸಂಘ ನಿಯಮಿತ ಚುನಾವಣೆಯಲ್ಲಿ ಸ್ಪರ್ಧಿಸುವ ಸದಸ್ಯರ ಉಮೇದುವಾರಿಕೆ ಅರ್ಜಿಯನ್ನು ಸಲ್ಲಿಸಲು ಕಾರ್ಯದರ್ಶಿ ಮುನಿಕೃಷ್ಣಪ್ಪ ತಿಳಿಸಿದ್ದಾರೆ.
ತಾಲೂಕಿನ ಅಂಬಾಜಿದುರ್ಗ ಹೋಬಳಿ ಕತ್ತರಿಗುಪ್ಪೆ ಹತ್ತಿ ಕೈಮಗ್ಗ ನೇಯ್ಗೆ ನೇಕಾರರ ಉತ್ಫಾದನೆ ಮತ್ತು ಮಾರಾಟ ಸಹಕಾರ ಸಂಘ ನಿಯಮಿತ ಸಂಘಕ್ಕೆ 2012-13 ರಿಂದ 2016-17 ಸಾಲಿನ ನಡೆಯುವ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಂದ 4 ರಂದು ನಾಮಪತ್ರ ಸಲ್ಲಿಸಲು ಕೋರಿದ್ದಾರೆ.
ನಾಮಪತ್ರವನ್ನು ಹಿಂಪಡೆಯಲು 5 ರಂದು ಮದ್ಯಾಹ್ನ 3 ರ ಒಳಗೆ ಕಾಲಾವಧಿಯನ್ನು ಸಹಕಾರ ಸಂಘಗಳ ಉಪ ನಿಬಂಧಕರ ಸೂಚನೆ ಮೇರೆಗೆ ಕೋರಲಾಗಿದೆ.ಹೆಚ್ಚಿನ ವಿವರಗಳಿಗಾಗಿ ಕತ್ತರಿಗುಪ್ಪೆ ಸಂಘದ ಕಚೇರಿಯಲ್ಲಿ ಮಾಹಿತಿಯನ್ನು ಪಡೆಯಲು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.