ಜಮೀನು ವಿವಾದ: ಇಬ್ಬರ ಮೇಲೆ ಹಲ್ಲೆ
ಚಿಂತಾಮಣಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಪತಿ- ಪತ್ನಿ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿರುವ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾರ್ಲಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಬಾರ್ಲಹಳ್ಳಿ ಗ್ರಾಮದ ಮೀನಾ ಎಂಬ ಮಹಿಳೆ ತನ್ನ ಮನೆ ಮುಂಭಾಗದ ಜಮೀನಿನಲ್ಲಿ ಹಸುಗಳಿಗೆ ಮೇವು ಹಾಕುತ್ತಿರುವಾಗ ಅದೇ ಗ್ರಾಮದ ಕೃಷ್ಣಮ್ಮ ಹಾಗೂ ಗಂಡ ಕೃಷ್ಣಾರೆಡ್ಡಿ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ದೊಣ್ಣೆಯಿಂದ ಹೊಡೆದಿದ್ದಾರೆ. ಪರಿಣಾಮ ಮೀನಾ ತೀವ್ರ ಗಾಯಗೊಂಡಿದ್ದಾರೆ. ಜಗಳ ಬಿಡಿಸಲು ಹೋದ ಮೀನಾ ಗಂಡ ಶ್ರೀನಿವಾಸಪ್ಪನ ಮೇಲೆ ಹಲ್ಲೆ ಮಾಡಿದ್ದಾರೆ. ಇಬ್ಬರನ್ನು ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಹಿಂದೆಯೂ ಮೀನಾ ತಾಯಿ ನಾರಾಯಣಮ್ಮನ ಮೇಲೆಯು ಸಹ ಹಲ್ಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.