ಸ್ವಾವಲಂಬಿ ಬದುಕಿಗೆ ಶಿಕ್ಷಣ ಅಗತ್ಯ: ಪುಟ್ಟಮ್ಮ
ಕೋಲಾರ: ಪ್ರಾಥಮಿಕ ಹಂತದಲ್ಲಿ ನೀಡುವ ಶಿಕ್ಷಣ ವ್ಯಕ್ತಿಯ ಜೀವನ ರೂಪಿಸುವಂತಾಗಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ವಾವಲಂಬಿಯಾಗಿ ಬದುಕಲು ಕಂಪ್ಯೂಟರ್ ಶಿಕ್ಷಣ ಅಗತ್ಯವಿದ್ದು, ಇಂತಹ ಲಕ್ಷಣ ಎಲ್ಲರಿಗೂ ದೊರೆಯುವಂತಾಗಬೇಕು ಎಂದು ತಾಪಂ ಸದಸ್ಯೆ ಪುಟ್ಟಮ್ಮ ಶಿವಣ್ಣ ಅಭಿಪ್ರಾಯಪಟ್ಟರು.
ತಾಲೂಕಿನ ಐತರಸನಹಳ್ಳಿ ಸಹಿಪ್ರಾ ಶಾಲೆಗೆ ತಮ್ಮ ಅನುದಾನದಿಂದ ಕಂಪ್ಯೂಟರ್ ಕೊಡುಗೆಯಾಗಿ ನೀಡಿ ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗಬೇಕಾಗಿದೆ. ಮೌಲ್ಯಾಧಾರಿತ, ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದು. ಶಾಲೆಗೆ ನಿಯಮಿತವಾಗಿ ಹಾಜರಾಗಿ ಕಲಿತು ಆದರ್ಶಪ್ರಾಯರಾಗಬೇಕೆಂದರು.
ಬೆಳೆಯುವ ವಯಸ್ಸಿನಲ್ಲಿ ಕಲಿಯುವ, ಆಟ ಆಡುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಣದ ಹಕ್ಕು ಕಲ್ಪಿಸಲು ನೆರವಾಗುವ ಜವಾಬ್ದಾರಿಯನ್ನು ಶಿಕ್ಷಕರು, ಪೋಷಕರು ಹೊರುವುದು ಸೂಕ್ತ. ಈ ನಿಟ್ಟಿನಲ್ಲಿ ಕಂಪ್ಯೂಟರ್ ಶಿಕ್ಷಣ ಇಂದಿನ ಅಗತ್ಯ ಎಂದು ತಾಪಂ ನಿರ್ಮಲ ಭಾರತ ಅಭಿಯಾನ ಸಮನ್ವಯಾಧಿಕಾರಿ ಜಿ. ಶ್ರೀನಿವಾಸ್ ತಿಳಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗೋಪಿನಾಥ್ ಮಾತನಾಡಿದರು.
ಜಿಲ್ಲಾ ಪ್ರಾಶಾಶಿ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಶಿಪ್ಪ ಮಾತನಾಡಿ, ಗಣಕ ಯಂತ್ರದ ಪರಿಚಯ ಎಲ್ಲಾ ವಿದ್ಯಾರ್ಥಿಗಳಿಗೆ ಆಗಬೇಕಾಗಿದ್ದು, ಎಲ್ಲಾ ಸರ್ಕಾರಿ ಶಾಲೆಗಳಿಗೂ ಕಂಪ್ಯೂಟರ್ ಒದಗಿಸಲು ಮನವಿ ಮಾಡಿದರು. ಎಸ್‌ಡಿಎಂಸಿ ಸಮಿತಿಯ ಅಧ್ಯಕ್ಷ ರೆಡ್ಡಪ್ಪ ಅಧ್ಯಕ್ಷತೆ ವಹಿಸಿದ್ದು, ಗ್ರಾಮ ಪಂಚಾಯಿತಿ ಸದಸ್ಯ ರಾಮಕೃಷ್ಣಪ್ಪ, ಐತರಸನಹಳ್ಳಿ ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ವಿ. ಸುಬ್ರಮಣ್ಯಂ ಸಮಿತಿಯ ಉಪಾಧ್ಯಕ್ಷ ರಾಜೇಂದ್ರ ಬಾಬು ಮುಖ್ಯೋಪಾದ್ಯಾಯ ಎಂ.ಕೃಷ್ಣಾರೆಡ್ಡಿ ಮತ್ತು ಇತರರು ಇದ್ದರು. ಸಿ.ಮುನಿರಾಜು ನಿರೂಪಿಸಿ, ಜಿ.ಎ. ಪ್ರಮೀಳಮ್ಮ ಸ್ವಾಗತಿಸಿ, ಸಿ.ಪದ್ಮಾವತಿ ವಂದಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.