ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಾಲಕಿ ಮೇಲೆ ಮಾನಭಂಗ ಯತ್ನ: ಪೊಲೀಸರ ನಿರ್ಲಕ್ಷ್ಯ

Mainashree
Updated On : 4 Feb 2013, 11:59 am

ಕೆಜಿಎಫ್: 7 ವರ್ಷದ ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ಸೆಲ್ವಿ ಹಾಗೂ ಕೋರಮಂಡಲ್ ಬಡಾವಣೆಯ ನಿವಾಸಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೆಮೆಲ್ ನಗರ ವ್ಯಾಪ್ತಿಯ ಕೋರಮಂಡಲ್ ನ್ಯೂ ಮಾಡಲ್ ಹೌಸ್ ನಿವಾಸಿ ಶ್ರೀನಿವಾಸ್ ಎಂಬವರು ಅದೇ ಬಡಾವಣೆಯ ಸೆಲ್ವಿ ಎಂಬವರ ಮಗಳನ್ನು ಕಳೆದ ಜ. 29 ರಂದು ಶ್ರೀನಿವಾಸ್ ಮಾನಭಂಗಕ್ಕೆ ಪ್ರಯತ್ನಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಬೆಮೆಲ್ ನಗರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶ್ರೀನಿವಾಸ್ ವಿರುದ್ಧ ಕ್ರಮ ಕೈಗೊಂಡಿಲ್ಲ. ಆತನು ಬಾಲಕಿಯ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದು,ಪೊಲೀಸರು ಶ್ರೀನಿವಾಸ್ ವಿರುದ್ಧ ಕ್ರಮಕ್ಕೆ ಮುಂದಾಗದಿರುವುದನ್ನು ಖಂಡಿಸಿ ಬಡಾವಣೆಯ ನಿವಾಸಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸ್ಥಳಕ್ಕಾಗಮಿಸಿದ ಪೊಲೀಸ್ ಉಪರಕ್ಷಣಾಧಿಕಾರಿ ರಾಜಣ್ಣ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದಾಗ ಪ್ರತಿಭಟನಾಕಾರರು- ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ನಂತರ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ ಪ್ರಕರಣ ದಾಖಲು ಮಾಡಲಾಗಿದೆ. ಪ್ರತಿಭಟನಾಕಾರರು ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಇದೇ ವೇಳೆ ಬಡಾವಣೆಯ ಮುಖಂಡ ಮುನಿಸ್ವಾಮಿ, ಮುತ್ತುಮಾಣಿಕ್ಯಂ ಸೇರಿದಂತೆ ಹಲವಾರು ಮಂದಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement