ಹರಪನಹಳ್ಳಿ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಾರಾಯಿ ಬದಲಿಗೆ ಪರ್ಯಾಯ ವ್ಯವಸ್ಥೆ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಪಟ್ಟಣದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರದಲ್ಲಿ ತಾನು ಸಿಎಂ ಆಗಿದ್ದಾಗ ರಾಜ್ಯದಲ್ಲಿ ಸಾರಾಯಿ ನಿಷೇಧಿಸಿದೆ. ಈಗ ಕಾಂಗ್ರೆಸ್ ಸಾರಾಯಿ ನಿಷೇಧ ತೆರವು ಮಾಡುತ್ತೇವೆ ಎಂದು ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು. ನಾವು ಸಾರಾಯಿಗೆ ಏನು ಪರ್ಯಾಯ ಕೊಡುತ್ತೇವೆ ಎಂದು ಈಗ ಹೇಳುವುದಿಲ್ಲ ಎಂದು ಗೌಪ್ಯವಾಗಿಟ್ಟರು.