ದಲಿತ ಸಿಂಹ ಸೇನೆಯಿಂದ ಬಿಎಸ್ಬಿ ಮುತ್ತಿಗೆ
ಬಂಗಾರಪೇಟೆ: ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಿಬ್ಬಂದಿ ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದದೆ ಪ್ರತಿ ದಿನ ಒಂದಲ್ಲಾ ಒಂದು ರೀತಿಯಲ್ಲಿ ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಿಂಹ ಸೇನೆ ಕಾರ್ಯಕರ್ತರು ಬ್ಯಾಂಕ್ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಪಟ್ಟಣದಲ್ಲಿ ಸದರಿ ಬ್ಯಾಂಕ್ ಆರಂಭವಾದ ಕೆಲವೇ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಆದರೆ ಸಿಬ್ಬಂದಿ ಮಾತ್ರ ಗ್ರಾಹಕರೊಂದಿಗೆ ಉತ್ತಮವಾಗಿ ನಡೆದುಕೊಳ್ಳದೆ ಬೇಕಾ ಬಿಟ್ಟಿಯಾಗಿ ವರ್ತಿಸುತ್ತಿರುವುದರಿಂದ ಗ್ರಾಹಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ಕಿಡಿಕಾರಿದರು. ಸೂಲಿಕುಂಟೆ ಆನಂದ್, ನಗರ ಅಧ್ಯಕ್ಷ ಹುಣಸನಹಳ್ಳಿ ರಮೇಶ್, ಕುಮ್ಮಿ, ಡಿ.ಆರ್, ನೇಣುಗೌಡ, ಪಿಳ್ಳಪ್ಪ,ಮುನಿಸ್ವಾಮಿ ಇದ್ದರು.