ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿದ್ಯುತ್ ಸಮಸ್ಯೆ ನಾಳೆ ಪ್ರತಿಭಟನೆ

Rashmi Kasaragodu
Updated On : 6 Feb 2013, 12:09 pm


ಮುಳಬಾಗಲು: ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಫೆ.7ರಂದು ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ರಾಮಲಿಂಗಾರೆಡ್ಡಿ ತಿಳಿಸಿದರು. ಪಟ್ಟಣದಲ್ಲಿ ಮಂಗಳವಾರ ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು ವಿದ್ಯುತ್ ಆಡಚಣೆಯಿಂದಾಗಿ ರೈತರ ಕೊಳವೆ ಬಾವಿಗಳಿಗೆ ಅಳವಡಿಸಲಾದ ಮೋಟರ್‌ಗಳು ಸುಟ್ಟುಹೋಗಿವೆ. ಬೆಳೆಗಳೂ ನಷ್ಟ ಹೊಂದಿವೆ ಎಂದು ಆರೋಪಿಸಿದರು.  ತಾಲೂಕಿನ ಎಲ್ಲಾ 5 ವಿದ್ಯುತ್ ಸರಬರಾಜು ಉಪ ಕೇಂದ್ರಗಳ ಅಧಿಕಾರಿಗಳನ್ನು ಕರೆಯಿಸಿ ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದೆಂದು ಎಚ್ಚರಿಸಿದ್ದಾರೆ. ಪ್ರತಿಭಟನೆ ಪಕ್ಷಾತೀತವಾಗಿದ್ದು ಪ್ರತಿಯೊಬ್ಬರು ಭಾಗವಹಿಸಲು ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಹಬಾಜ್ ಖಾನ್ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement