ಕೋಲಾರ

ಹರಾಜು ಪ್ರಕ್ರಿಯೆ ಮುಂದುವರಿಸಿ




ಚಿಂತಾಮಣಿ: ಯಾವುದೇ ಒತ್ತಡಕ್ಕೆ ಮಣಿಯದೆ ಮಾವು ಫಸಲು ಹರಾಜು ಪ್ರಕ್ರಿಯೆ ಮುಂದುವರೆಸಿ ಎಂದು ತಹಸೀಲ್ದಾರ್ ಅವರನ್ನುಒತ್ತಾಯಿಸಿ ಜೋಗ್ಯಾನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ತಾಲೂಕಿನ ಮುರುಗಮಲ್ಲ ಹೋಬಳಿ ಜೋಗ್ಯಾನಹಳ್ಳಿ ಗ್ರಾಮದ ಸರ್ವೆ ನಂ.22 ಸರ್ಕಾರಿ ಖರಾಬು ತೋಪು 5 ಎಕರೆ 22 ಕುಂಟೆ ಜಮೀನಿನಿಂದ ವಿವಿಧ ಮರಗಳ ಫಸಲನ್ನು 3 ವರ್ಷದಿಂದ ಬಹಿರಂಗ ಹರಾಜು ಪ್ರಕ್ರಿಯೆ ಮೂಲಕ ಹರಾಜು ಮಾಡಿ ಹಣವನ್ನು ಕಂದಾಯ ಲೆಕ್ಕಕ್ಕೆ ಜಮಾ ಮಾಡಿಕೊಳ್ಳುತ್ತಿರುವುದು ಸರಿಯಷ್ಟೆ. ಆದರೆ, ಹಲವರು ಬಹಿರಂಗ ಹರಾಜು ಮಾಡಬಾರದೆಂದು ಒತ್ತಾಯಿಸುತ್ತಿದ್ದಾರೆ.  ಇದರ ಹಿಂದೆ ಕೆಲವು ಪಟ್ಟಭದ್ರ ವ್ಯಕ್ತಿಗಳ ಕೈವಾಡ ಇದ್ದು, ಸರ್ಕಾರಿ ಜಮೀನನ್ನು ಕಬಳಿಸಲು ಸಂಚು ಮಾಡುತ್ತಿದ್ದಾರೆ ಎಂದು ಮುಖಂಡರಾದ ಲಕ್ಷ್ಮಿನಾರಾಯಣರೆಡ್ಡಿ, ಶ್ರೀರಾಮರೆಡ್ಡಿ, ಜೋಗ್ಯಾನಹಳ್ಳಿ ಶಿವಾರೆಡ್ಡಿ, ಮಂಜುನಾಥ್, ವೆಂಕಟೇಶ್, ಆಂಜಪ್ಪ, ತಮ್ಮೇಪಲ್ಲಿ ಮಂಜುನಾಥರೆಡ್ಡಿ, ವೆಂಕಟರವಣಪ್ಪ,ನಾರಾಯಣಸ್ವಾಮಿ, ರಾಂಪುರ ಶ್ರೀನಿವಾಸ್ ಸೇರಿದಂತೆ ನೂರಾರು ಮಂದಿ ಪ್ರತಿಭಟನೆ ನಡೆಸಿ ಹರಾಜು ಪ್ರಕ್ರಿಯೆ ಮುಂದುವರೆಸಬೇಕೆಂದು ಆಗ್ರಹಿಸಿದರು. ನಂತರ ಈ ಸಂಬಂಧ ತಾಲೂಕು ದಂಡಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!