ಕೋಲಾರ

ಸವಿತಾ ಸಾವು: ಆರೋಪಿಗಳ ಬಂಧನಕ್ಕೆ ಒತ್ತಾಯ

ಚಿಂತಾಮಣಿ: ಚಿಕ್ಕಬಳ್ಳಾಪುರದಲ್ಲಿನ ಬೆಸ್ಕಾಂ ಅಧಿಕಾರಿ ಸವಿತಾ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಶುಕ್ರವಾರ ಚಿಂತಾಮಣಿ ಉಪ ವಿಭಾಗದ ಕಚೇರಿ ಮುಂಭಾಗದಲ್ಲಿ ಬೆಸ್ಕಾಂ ಅಧಿಕಾರಿಗಳು ಹಾಗೂ ನೌಕರರು ಕಾರ್ಯಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ತಾಲೂಕಿನ ಕೆಪಿಟಿಸಿಎಲ್ ನೌಕರರ ಸಂಘ ಹಾಗೂ ಎಂಜಿನಿಯರ್ ಸಂಘ ಸಹಯೋಗದೊಂದಿಗೆ ನೂರಾರು ನೌಕರರು ಚಿಕ್ಕಬಳ್ಳಾಪುರ ಸಹಾಯಕ ಎಂಜಿನಿಯರ್ ತಾಂತ್ರಿಕ ಅಧಿಕಾರಿ ಸವಿತಾಗೆ ಅಲ್ಲಿನ ಗುತ್ತಿಗೆದಾರರು ದೈಹಿಕ ಹಾಗೂ ಮಾನಸಿಕವಾಗಿ ಕಿರುಕುಳ ನೀಡಿದ ಪರಿಣಾಮ ಕಿರುಕುಳ ತಾಳಲಾರದೆ ನೇಣಿಗೆ ಶರಣಾಗಿರುವುದಾಗಿ ಮರಣ ಪತ್ರದಲ್ಲಿ ಸವಿತಾ ಬರೆದಿರುವುದಾಗಿ ಅಧಿಕಾರಿಗಳು ಹಾಗೂ ನೌಕರರು ಆರೋಪಿಸಿದರು. ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ನ್ಯಾಯಕ್ಕಾಗಿ ಒತ್ತಾಯಿಸಿ ಮುಂದಿನ ದಿನಗಳಲ್ಲಿ ಹಂತಹಂತವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ತಿಳಿಸಿದರು. ಬೆಸ್ಕಾಂ ಅಧಿಕಾರಿಗಳಾದ ಹೇಮಲತ, ಶ್ರೀನಾಥ್, ಶುಭ, ಶಿವಶಂಕರ್, ಕೃಷ್ಣಾರೆಡ್ಡಿ, ಸೂರ್ಯಪ್ರಕಾಶ್, ನೌಕರರಾದ ಜಿ.ಎಂ.ನಾಗರಾಜ್, ನಾಗರಾಜ್, ಮಂಜುನಾಥ್,  ನೌಕರರು ಭಾಗವಹಿಸಿದ್ದರು.
ಬೆಸ್ಕಾಂ ಎಂಜಿನಿಯರ್ ಸವಿತಾ ಆತ್ಮಹತ್ಯೆ
ಬೆಂಗಳೂರು:  ಗುತ್ತಿಗೆದಾರರ ಕಿರುಕುಳ ತಾಳದೆ ಬೆಸ್ಕಾಂನ ಸಹಾಯಕ ನಿರ್ವಾಹಕ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸವಿತಾ(29) ಆತ್ಮಹತ್ಯೆ ಮಾಡಿಕೊಂಡವರು. ಸಿದ್ದಾಪುರದ ಸೋಮೇಶ್ವರ ನಗರದಲ್ಲಿ ಗುರುವಾರ ರಾತ್ರಿ ನೇಣುಹಾಕಿಕೊಂಡಿದ್ದಾರೆ.
  ಅವಿವಾಹಿತೆಯಾಗಿದ್ದ ಸವಿತಾ ಚಿಕ್ಕಬಳ್ಳಾಪುರದ ಬೆಸ್ಕಾಂ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುತ್ತಿಗೆದಾರನ ಕಿರುಕುಳದಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಮರಣಪತ್ರ ಬರೆದಿಟ್ಟಿದ್ದಾರೆ.
 ಈ ಸಂಬಂಧ ಸಿದ್ದಾಪುರ ಠಾಣೆ ಪೊಲೀಸರು ಎಲೆಕ್ಟ್ರಿಕಲ್ ಗುತ್ತಿಗೆದಾರ ನಾಗರಾಜ್(52)ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!