ಕೋಲಾರ

14 ರಂದು ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ

ಮಾಲೂರು: ಇಲ್ಲಿನ ಬಸ್ ನಿಲ್ದಾಣದ ಬಳಿ ಉದ್ಯಾನವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ರವರ ನೂತನ ಪ್ರತಿಮೆ ಫೆ.14ರಂದು ಉದ್ಘಾಟನೆಗೊಳ್ಳಲಿದೆ.
ಈ ಬಗ್ಗೆ ಪುರಸಭೆ ಅಧ್ಯಕ್ಷೆ ಅಮುದಾ ವೇಣುರವರ ಅಧ್ಯಕ್ಷತೆಯಲ್ಲಿ ತಾಲೂಕಿನ ದಲಿತ ಸಂಘಟನೆಗಳ ಮುಖಂಡರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂದೇ ಬೆಂಗಳೂರು ರಸ್ತೆಯ ಪಂಪ್ ಹೌಸ್‌ನಿಂದ ರೇಲ್ವೆ ಸೇತುವೆ ತನಕ ಇರುವ ಡಬ್ಬಲ್ ರಸ್ತೆಗೆ ಡಾ. ಅಂಬೇಡ್ಕರ್ ರಸ್ತೆ ಎಂದು ಹೆಸರಿಡಲು ಪುರಸಭೆ ಸದಸ್ಯರ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ಅಧ್ಯಕ್ಷೆ ಅಮುದಾ ವೇಣು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮು.ತಿಮ್ಮಯ್ಯ,ಪ್ರತಿಮೆ ಉದ್ಘಾಟನೆ ಬೌದ್ಧ ಭಿಕ್ಕುಗಳ ಮಾರ್ಗದರ್ಶನದಂತೆ ನಡೆಯಬೇಕು ಎಂದರು.ನಿವೃತ್ತ ಶಿಕ್ಷಣಾಧಿಕಾರಿ ಪಾಪಣ್ಣ ಮಾತನಾಡಿದರು. ಪುರಸಭೆ ಉಪಾಧ್ಯಕ್ಷ ಸಿ.ಪಿ.ನಾಗರಾಜ್, ಜಿ.ಪಂ ಸದಸ್ಯೆ ಯಲ್ಲಮ್ಮ, ರಾಮಸ್ವಾಮಿ ರೆಡ್ಡಿ, ಪುರಸಭೆ ಸದಸ್ಯ ರಾಮಚಂದ್ರ, ವಾಲ್ಮೀಕಿ ಸಂಘದ ವೆಂಕಟರಾಮ್, ಬಂ.ನಾರಾಯಣಸ್ವಾಮಿ, ವೇಮನ, ತಬಲ ನಾರಾಯಣಸ್ವಾಮಿ ಮಾತನಾಡಿದರು. ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್