ವಿದ್ಯುತ್ ತಂತಿ ತಗುಲಿ ಲೈನ್ಮ್ಯಾನ್ ಸಾವು
ಮುಳಬಾಗಲು: ತಾಲೂಕಿನ ಬಲ್ಲಶೆಟ್ಟಿಹಳ್ಳಿ ಗ್ರಾಮದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ಸ್ ದುರಸ್ತಿ ಮಾಡುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ವೊಬ್ಬರು ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ. ತಾಲೂಕಿನ ತೊರಡಿಯ ರಮೇಶ್ (30) ಮೃತಪಟ್ಟವರು. ಸುದ್ದಿ ತಿಳಿದು ತೊರಡಿ ಗ್ರಾಮಸ್ಧರು ಹಾಗೂ ಬೆಸ್ಕಾಂ ನೌಕರರು ಪಟ್ಟಣದ ಬೆಸ್ಕಾಂ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಇಲಾಖೆಯಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿದರು. ಪ್ರತಿಭಟನೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಧಳಕ್ಕೆ ಆಗಮಿಸಿದ ಬೆಸ್ಕಾಂ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ಸು ಪಡೆಯಲಾಯಿತು.