ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬೆಸ್ಕಾಂಗೆ ರೈತ ಸಂಘ ಮುತ್ತಿಗೆ, ಪರಿಹಾರಕ್ಕೆ ಆಗ್ರಹ

Rashmi Kasaragodu
Updated On : 13 Feb 2013, 12:12 pm

ಗುಡಿಬಂಡೆ: ಅಸಮರ್ಪಕ ವಿದ್ಯುತ್ ಸರಬರಾಜಿನಿಂದ ತಾಲೂಕಿನಲ್ಲಿ ರೈತರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಇದರಿಂದಾಗಿ ಕೃಷಿಕರು ಆಪಾರ ನಷ್ಟ ಅನುಭವಿಸುವಂತಾಗಿದೆಯೆಂದು ದೂರಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ್ ಬಣದ ತಾಲೂಕು ಮಹಿಳಾ ಘಟಕ ಸೋಮವಾರ ಸ್ಥಳೀಯ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ವ್ಯಕ್ತಪಡಿಸಿತು.
ಘಟಕದ ತಾಲೂಕು ಅಧ್ಯಕ್ಷೆ ಆದಿಲಕ್ಷ್ಮಮ್ಮ ಮಾತನಾಡಿ ವಿದ್ಯುತ್ ಕೊರತೆಯಿಂದಾಗಿ ಕೊಳವೆ ಬಾವಿಗಳನ್ನು ನಂಬಿರುವ ರೈತರು ಕಂಗಾಲಾಗಿದ್ದಾರೆ. ಬೆಳೆಗಳಿಗೆ ನಿಗದಿತ ಸಮಯಕ್ಕೆ ನೀರುಣಿಸಲು ಸಾಧ್ಯವಾಗದೆ ತೊಂದರೆಗೆ ಸಿಲುಕಿದ್ದಾರೆ. ಇಲಾಖೆ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ರೈತರಿಗೆ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡಿ ವಿದ್ಯುತ್ ಕೊರತೆ ನೀಗಿಸುವಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಕಚೇರಿಯ ಹಿರಿಯ ಸಹಾಯಕ ಎನ್.ನರಸಿಂಹ ಮೂರ್ತಿ ಬೇಡಿಕೆಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸಲಾಗುವುದೆಂದು ನುಡಿದರು.
ಪ್ರತಿಭಟನೆಯಲ್ಲಿ ಘಟಕದ ಜಿಲ್ಲಾಧ್ಯಕ್ಷ ಬಿ.ಹೆಚ್. ನರಸಿಂಹಯ್ಯ ಹಾಗೂ ಮುಖಂಡರಾದ ವೆಂಕಟರಮನಪ್ಪ ಗಂಗನಾರಾಯಣಪ್ಪ ನರಸಿಂಹ ಮೂರ್ತಿ, ವೆಂಕಟರೆಡ್ಡಿ ಸೇರಿದಂತೆ ಹಲವರಿದ್ದರು.
ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement