ಕೋಲಾರ

ಲಾರಿಗೆ ಬಸ್ ಡಿಕ್ಕಿ: 15 ಜನರಿಗೆ ಗಾಯ

ಚಿಕ್ಕಬಳ್ಳಾಪುರ: ಮಂತ್ರಾಲಯದಿಂದ ಬೆಂಗಳೂರಿನ ಕಡೆಗೆ ಹೊರಟಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಕೆಟ್ಟು ನಿಂತಿದ್ದ ಲಾರಿಗೆ (ಸಿಮೆಂಟ್ ಟ್ಯಾಂಕರ್) ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಚೊಕ್ಕಹಳ್ಳಿ ಬಳಿ ಮಂಗಳವಾರ ಮುಂಜಾನೆ ಸಂಭವಿಸಿದೆ.
ಚೊಕ್ಕಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7 ರ ರಸ್ತೆಯಲ್ಲಿ ಆಂಧ್ರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಟಿಪ್ಪರ್ ಕೆಟ್ಟು ನಿಂತು ಹೋಗಿದ್ದು ವಾಹನಗಳು ವೇಗವಾಗಿ ಸಂಚರಿಸುವ ರಸ್ತೆಯಲ್ಲಿ ಆ ಲಾರಿಯ ಇಂಡಿಕೇಟರ್ ಹಾಕದೇ ಇರುವುದು ಘಟನೆ ಸಂಭವಿಸಲು ಪ್ರಮುಖ ಕಾರಣ ಎನ್ನಲಾಗಿದೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಬೆಳಿಗ್ಗೆ ಕತ್ತಲಲ್ಲಿ ಲಾರಿ ಕೆಟ್ಟು ನಿಂತಿರುವುದು ಕಾಣಿಸಿಲ್ಲ. ಇದರಿಂದ ಲಾರಿಗೆ ಬಸ್ ನೇರವಾಗಿ ಡಿಕ್ಕಿ ಹೊಡೆದಿದ್ದು ಬಸ್ ಚಾಲಕ ಜೋಷಿ, ನಿರ್ವಾಹಕ ಮಂಜುನಾಥ್, ಶ್ಯಾಮಲ, ರಾಧಾ, ವಿಜಯಲಕ್ಷ್ಮೀ, ಸತೀಶ್‌ಕುಮಾರ್, ಸುಧಾ, ವಿರೇಶ್, ನಾರಾಯಣಚಾರ್, ಸಂತೋಷ್, ರೋನಾಲ್ಟ್, ರೋಹಿಣಿ ರೋನಾಲ್ಟ್, ಮಂಜುನಾಥ್, ಸತೀಶ್ ಕುಲಕರ್ಣಿ, ನಿವೃತ್ತ ಉಪ ವಿಭಾಗಾಧಿಕಾರಿ ಎಸ್.ಎನ್. ಜೋಷಿ ಗಾಯಗೊಂಡಿದ್ದಾರೆ. ಇವರಲ್ಲಿ ಬಸ್ ಚಾಲಕ ಜೋಷಿಯವರ ಸ್ಥಿತಿ ಗಂಭೀರವಾಗಿದೆ. ತಲೆಗೆ ಪೆಟ್ಟು ಬಿದ್ದಿದ್ದು ಕಾಲು ಮುರಿದಿದೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.  ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ರೋಗಿಗಳನ್ನು ಆಸ್ಪತ್ರೆಗೆ ಸೇರಿಸಿ, ತುರ್ತು ಚಿಕಿತ್ಸೆ ಕೊಡಿಸಿದರು.
ಚಿಕಿತ್ಸೆಗೆ ಪರದಾಟ: ಸರ್ಕಾರಿ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ  ಕೊಡಿಸಲು ಪರದಾಡಬೇಕಾಯಿತು. ಅನಿವಾರ್ಯವಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.    ಸಾರಿಗೆ ಸಂಸ್ಥೆಯ ಅಧಿಕಾರಿಗಳು ಪರಿಹಾರ ಕಾರ್ಯವನ್ನು ಕೈಗೊಂಡು, ಪ್ರಯಾಣಿಕರನ್ನು ಅವರವರ ಊರುಗಳಿಗೆ ಕಳುಹಿಸಲು ಪರ್ಯಾಯ ವ್ಯವಸ್ಥೆ ಮಾಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್