ಕೋಲಾರ

ವೈದ್ಯ ಸಿಬ್ಬಂದಿ ಹಾಜರು: ರೋಗಿಗಳು ನಿರಾಳ

ಕೋಲಾರ: ಕಳೆದ ಐದು ದಿನಗಳಿಂದ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದ ವೈದ್ಯಾಧಿಕಾರಿಗಳು ಸರ್ಕಾರ ನೀಡಿರುವ ಭರವಸೆ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಮುಷ್ಕರ ಹಿಂದಕ್ಕೆ ಪಡೆದು ಮಂಗಳವಾರದಿಂದ ಕರ್ತವ್ಯಕ್ಕೆ ಹಾಜರಾಗಿರುವುದರಿಂದ ರೋಗಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಜಗದೀಶ್, ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಐಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಟಿ. ಸುರೇಶ್‌ಬಾಬು, ಸಂಘಟನಾ ಕಾರ್ಯದರ್ಶಿ ನಂದೀಶ್‌ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಮಂಜುನಾಥ್ ಅವರು ಮಂಗಳವಾರ ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ಅವರನ್ನು ಭೇಟಿಯಾಗಿ ಮಾನವೀಯತೆಯ ದೃಷ್ಟಿಯಿಂದ ಮುಷ್ಕರ ಹಿಂದಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು. ಸರ್ಕಾರ ಕಳೆದ ಮೂರು ವರ್ಷಗಳಿಂದ ನಮ್ಮ ಬೇಡಿಕೆ ಈಡೇರಿಸುತ್ತಿಲ್ಲ, ರೋಗಿಗಳಿಗೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕಾಗಿಯೇ ಅನೇಕ ಸಾರಿ ಸೋತಿದ್ದೇವೆ. ಕಳೆದ ಐದು ದಿನಗಳಲ್ಲಿ ರೋಗಿಗಳಿಗೆ ಆಗಿರುವ ತೊಂದರೆಗೆ ನಮ್ಮ ವಿಷಾದವಿದ್ದು, ಸರ್ಕಾರ ಕೊಟ್ಟ ಮಾತಿನಂತೆ ಒಂದು ವಾರದೊಳಗೆ ಬೇಡಿಕೆ ಈಡೇರಿಸಲು ಬದ್ಧತೆ ತೋರಬೇಕಾಗಿದೆ ಎಂದು ತಿಳಿಸಿದರು. ವೈದ್ಯರಿಲ್ಲದೆ ಪರದಾಡುತ್ತಿದ್ದ ರೋಗಿಗಳು ಇಂದು ಜಿಲ್ಲಾಸ್ಪತ್ರೆಗೆ ಬಂದು ತಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!