ಪ್ರತ್ಯೇಕ ಪ್ರಕರಣ: 2 ಚಿನ್ನದ ಸರ ಅಪಹರಣ
ಕೋಲಾರ: ರಾಷ್ಟ್ರೀಯ ಹೆದ್ದಾರಿ-4ರ ಸರ್ವೀಸ್ ರಸ್ತೆಯಲ್ಲಿರುವ ಬಿ.ಜಿ.ಎಸ್.ಕಾಲೇಜಿನ ಬಳಿ ಗುರುವಾರ ಬೆಳಿಗ್ಗೆ ವಾಯು ವಿಹಾರಕ್ಕೆ ಹೊರಟಿದ್ದ ಮಹಿಳೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಅಪಹರಿಸಿದ್ದಾರೆ. ಕೋಲಾರ ನಗರದ ಜಯನಗರದ ವಾಸಿ ಲಲಿತಮ್ಮ ಎಂಬುವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚತ ವ್ಯಕ್ತಿಗಳು ಲಲಿತಮ್ಮ ರವರ ಕತ್ತಿನಲ್ಲಿದ್ದ 1 ಲಕ್ಷ ರು.ಬೆಲೆ ಬಾಳುವ 35 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಶಿಡ್ಲಘಟ್ಟ: ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯೊಬ್ಬರಿಂದ ಅಪರಿಚಿತರಿಬ್ಬರು ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಶಿಕ್ಷಕಿಯಾದ ಲಕ್ಷ್ಮೀಕಾಂತಮ್ಮ ಮಧ್ಯಾಹ್ನ ಊಟ ಮುಗಿಸಿ ಶಾಲೆಗೆ ವಾಪಸ್ ಬರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ಶಿಕ್ಷಕಿಯ ಕತ್ತಿನಲ್ಲಿದ್ದ ಸುಮಾರು 30 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ವೇಗವಾಗಿ ಪರಾರಿಯಾಗಿದ್ದಾರೆ.