ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಭಿನ್ನಮತ ಮರೆತು ಪಕ್ಷದ ಗೆಲವಿಗೆ ಶ್ರಮಿಸಿ: ಆಂಜಿನಪ್ಪ

Rashmi Kasaragodu
Updated On : 16 Feb 2013, 12:15 pm

ಚಿಕ್ಕಬಳ್ಳಾಪುರ: ಸಾಮಾನ್ಯವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಕಷ್ಟು ಮಂದಿ ಆಕಾಂಕ್ಷಿಗಳಿರುವುದು ಸಹಜ. ಆದರೆ, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಭಿನ್ನಮತ ಮರೆತು ಆ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕಾಗಿರುವುದು ಮುಖ್ಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಆಂಜಿನಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಸಿಟಿಜನ್ ಕ್ಲಬ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು 11ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಪಕ್ಷ ಒಬ್ಬರಿಗೆ ಮಾತ್ರ ಟಿಕೆಟ್ ನಿಡಲು ಸಾಧ್ಯ. ಇದರಿಂದ ಉಳಿದ ಆಕಾಂಕ್ಷಿಗಳು ಬೇಸರಗೊಳ್ಳುವ ಅವಶ್ಯಕತೆಯಿಲ್ಲ. ವ್ಯಕ್ತಿಯ ಗೆಲುವಿಗಿಂತ ಪಕ್ಷದ ಗೆಲುವು ಮುಖ್ಯ ಎಂದುಕೊಂಡು ಪಕ್ಷಕ್ಕಾಗಿ ದುಡಿಯಬೇಕೆಂದು ತಿಳಿಸಿದರು.
ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ಮಾತನಾಡಿ, ವೈಯಕ್ತಿಕ ಪ್ರತಿಷ್ಠೆಗಳಿಗೆ ಒತ್ತು ಕೊಟ್ಟು ಮುಂದೆ ಟಿಕೆಟ್ ಸಿಗದೇ ಗಲಾಟೆ ಮಾಡುವಂತಹವರು ಈಗಲೇ ಬೇಕಾದರೆ ಪಕ್ಷವನ್ನು ಬಿಟ್ಟು ಹೋಗಲಿ. ಚುನಾವಣೆಯ ಸಂದರ್ಭದಲ್ಲಿ ಸುಮ್ಮನೆ ಗೊಂದಲವನ್ನು ಮೂಡಿಸುವುದು ಬೇಡ. ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರು ಬೇಕು. ಇವರ ಮೇಲೆಯೇ ಪಕ್ಷದ ಸಂಘಟನೆ ಅವಲಂಬಿಸಿರುವುದು ಎಂದರು. ಕಾಂಗ್ರೆಸ್ ಮುಖಂಡ ಲಾಯರ್ ನಾರಾಯಣಸ್ವಾಮಿ ಮಾತನಾಡಿದರು. ಕಾಂಗೈ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಎಂ.ಮುನಿಕೃಷ್ಣಪ್ಪ ಮಾತನಾಡಿ, ತಮಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು. ಮುಖಂಡರಾದ ಯಲುವಹಳ್ಳಿ ರಮೇಶ್, ಗಂಗರೆಕಾಲುವೆ ನಾರಾಯಣಸ್ವಾಮಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋವಿಂದಸ್ವಾಮಿ, ವರದರಾಜ್, ನಗರಸಭಾ ಮಾಜಿ ಅಧ್ಯಕ್ಷ ಬಿ.ಎ.ಲೋಕೇಶ್ ಕುಮಾರ್, ಮುಖಂಡರಾದ ಕೆ.ವಿ.ನವೀನ್ ಕಿರಣ್, ರಾಯಪ್ಪ, ಎ.ವೈ.ಮರಿಯಪ್ಪ, ಸದಸ್ಯ ಶಂಕರರಾಜ್, ವೆಂಕಟೇಶ್, ಶ್ರೀಧರ್ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement