ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಹಳ್ಳಿಗಳಲ್ಲಿ ನೆಮ್ಮದಿ ಬದುಕು ಕಾಣಬೇಕು: ಜಯಶ್ರೀ

Parashurama
Updated On : 18 Feb 2013, 12:51 pm

ಕೋಲಾರ:  ಗ್ರಾಮೀಣ ಪ್ರದೇಶದ ಜನತೆ ರಾಜಕಾರಣವನ್ನು ಬದಿಗಿಟ್ಟು ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರದತ್ತ ಹೊರಳುವುದರಿಂದ ಮಾನಸಿಕ ಶಾಂತಿ-ನೆಮ್ಮದಿ ಪಡೆದುಕೊಳ್ಳಬಹುದು ಎಂದು ರಾಜ್ಯಸಭಾ ಸದಸ್ಯೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದೆ ಜಯಶ್ರೀ ತಿಳಿಸಿದರು.
ಶನಿವಾರ ವೇಮಗಲ್‌ನಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಅವರು ತಮ್ಮ ಹುಟ್ಟುಹಬ್ಬವನ್ನು ಊರ ಹಬ್ಬವಾಗಿ ಆಚರಿಸಿದ ಸಂದರ್ಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಮಾತನಾಡಿ, ಇನ್ನು ಮುಂದೆ ಪ್ರತಿವರ್ಷ ಸಾಂಸ್ಕೃತಿಕ, ಸಾಹಿತ್ಯಿಕ, ಕ್ರೀಡಾ, ಧಾರ್ಮಿಕ, ಮಹಿಳಾ ಕಾರ್ಯಕ್ರಮ ಒಳಗೊಂಡ ಮೂರು ದಿನಗಳ ವೇಮಗಲ್ ಹಬ್ಬ ಆಚರಣೆಗೆ ನಿರ್ಧರಿಸಲಾಗಿದೆ. ಈ ವರ್ಷ ಸಮಯದ ಅಭಾವದ ಕಾರಣ ಒಂದು ದಿನಕ್ಕೆ ಕಾರ್ಯಕ್ರಮ ಸೀಮಿತಗೊಳಿಸಲಾಗಿದೆ. ಮುಂದಿನ ವರ್ಷಗಳಲ್ಲಿ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಗ್ರಾಮದಲ್ಲಿ ಊರಹಬ್ಬದ ಸಂಭ್ರಮ ಮೂಡಿಸಲಾಗುವುದು ಎಂದರು.
ಗ್ರಾಮದಲ್ಲಿ ಹಿಂದೆ ನಡೆಯುತ್ತಿದ್ದ ವಿವಿಧ ರೀತಿಯ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಮುಂದುವರಿಸುವ ಮೂಲಕ ಹೊಸ ಪೀಳಿಗೆಗೆ ಹಳೆಯ ತಲೆಮಾರಿನ ಪರಿಚಯದ ಜತೆಗೆ ಸ್ಫೂರ್ತಿ ಮೂಡಿಸಲು ಉದ್ದೇಶಿಸಲಾಗಿದೆ.  ವೇಮಗಲ್‌ನಲ್ಲಿ ಜಿಲ್ಲಾ ಅಥವಾ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದರೆ ಎಲ್ಲ ಸಹಕಾರ ನೀಡಲಾಗುವುದು ಎಂದರು.
ಬಯಲು ಮಂದಿರದಲ್ಲಿ ಶ್ರೀರಾಮಶೆಟ್ಟಿ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಧಾ ಬರಗೂರು ಅವರಿಂದ ನಗೆ ಸಂಜೆ, ವೇಮಗಲ್ ರಾಜು ತಂಡದಿಂದ ನಡೆದ ಸುಗಮ ಸಂಗೀತ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಾಯಕ ವೇಮಗಲ್ ಡಿ.ನಾರಾಯಣಸ್ವಾಮಿ, ಬರಹಗಾರ-ರಂಗಕರ್ಮಿ ಕೋಟಿಗಾನಹಳ್ಳಿ ರಾಮಯ್ಯ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್, ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್, ಜಿಲ್ಲಾ ಕಸಾಪ ಅಧ್ಯಕ್ಷ ಜೆ.ಜಿ. ನಾಗರಾಜ್, ಅಂತರ ರಾಷ್ಟ್ರೀಯ ಕೈಗಾರಿಕೋದ್ಯಮಿ ಹೋಳೂರು ರಾಚಪ್ಪ, ಜಿಲ್ಲಾ ಅಂಜುಮನ್ ಸಂಸ್ಥೆ ಅಧ್ಯಕ್ಷ ಜಮೀರ್ ಅಹ್ಮದ್, ಗೋಕುಲ ಸಂಸ್ಥೆ ಅಧ್ಯಕ್ಷ ಗೋಕುಲ ನಾರಾಯಣಸ್ವಾಮಿ, ಸಹ್ಯಾದ್ರಿ ಕಾಲೇಜು ಸಂಸ್ಥಾಪಕ ಉದಯಕುಮಾರ್, ಮೆಥೋಡಿಸ್ಟ್ ಚರ್ಚ್ ಪಾದ್ರಿ ರೆವರೆಂಡ್ ಎಸ್.ನೆಶಾಕ್‌ರನ್ನು ಸನ್ಮಾನಿಸಲಾಯಿತು.
ಗ್ರಾಪಂ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷರು, ಸದಸ್ಯರು, ರಾಮಶೆಟ್ಟಿ ಅಭಿಮಾನಿ ಬಳಗದ ಸಿ.ಎಸ್.ವೆಂಕಟೇಶ್, ಬಾಷಾ, ನಾಗರಾಜ್, ತಾ.ಪಂ ಮಾಜಿ ಸದಸ್ಯ ನಾಗನಾಳ ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement