ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಪಘಾತ: ಬೈಕ್ ಸವಾರ ಸಾವು

Mainashree
Updated On : 19 Feb 2013, 10:25 am

ಬಂಗಾರಪೇಟೆ: ದ್ವಿಚಕ್ರ ವಾಹನ ಮತ್ತು ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟು ಮತ್ತೊಬ್ಬ ತೀವ್ರ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಮೃತನನ್ನು ತಾಲೂಕಿನ ಮರಗಲ್ ಗ್ರಾಮದ ಸುರೇಶ್ (32) ಎಂದು ಗುರುತಿಸಲಾಗಿದೆ. ಗಾಯಾಳು ಇದೇ ಗ್ರಾಮದ ಶ್ರೀನಿವಾಸ್ ಎನ್ನಲಾಗಿದ್ದು, ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಇಬ್ಬರು ಪಟ್ಟಣಕ್ಕೆ ಬಂದಿದ್ದು ರಾತ್ರಿ ಇಬ್ಬರೂ ಬೈಕ್‌ನಲ್ಲಿ ಗ್ರಾಮಕ್ಕೆ ಹೋಗಲು ಪಟ್ಟಣದ ಹೊರವಲಯದ ಎಸ್.ಎನ್.ರೆಸಾರ್ಟ್ ಬಳಿ ತಿಮ್ಮಾಪುರ ಗೇಟ್ ತಿರುವಿನಲ್ಲಿ ಕೋಲಾರ ಕಡೆಯಿಂದ ನೇರವಾಗಿ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸುರೇಶ್ ್ಡಹಾಗೂ ಹಿಂಬದಿಯಲ್ಲಿ ಕುಳಿತಿದ್ದ ಶ್ರೀನಿವಾಸ ತಲೆಗೆ ತೀವ್ರವಾಗಿ ಗಾಯವಾಗಿದ್ದು ತಕ್ಷಣ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸುರೇಶ್ಮೃತಪಟ್ಟಿದ್ದಾನೆ ಶ್ರೀನಿವಾಸನನ್ನು ತೀವ್ರ ನಿಘ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement