ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದಿನಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Mainashree
Updated On : 19 Feb 2013, 10:25 am

ಚಿಕ್ಕಬಳ್ಳಾಪುರ: ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಫೆ.19 ರಿಂದ ಫೆ.27 ರವರೆಗೆ ಜಿಲ್ಲೆಯ ವಿವಿಧೆಡೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಫೆ.19 ರಂದು ಗುಡಿಬಂಡೆ ತಾಲೂಕು ಪಂಚಾಯ್ತಿ ಕಚೇರಿಯ ಸಭಾಂಗಣದಲ್ಲಿ, ಫೆ.20 ರಂದು ಶಿಡ್ಲಘಟ್ಟ ತಾಲೂಕು ಪಂಚಾಯ್ತಿ ಕಚೇರಿಯ ಸಭಾಂಗಣದಲ್ಲಿ, ಫೆ.22 ರಂದು ಚಿಕ್ಕಬಳ್ಳಾಪುದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ, ಫೆ.23 ರಂದು ಬಾಗೇಪಲ್ಲಿ ಪುರಸಭೆ ಕಚೇರಿಯ ಸಭಾಂಗಣದಲ್ಲಿ, ಫೆ.26 ರಂದು ಗೌರಿಬಿದನೂರು ತಾಲೂಕು ಪಂಚಾಯ್ತಿ ಸಾಮರ್ಥ್ಯಸೌಧ ಸಭಾಂಗಣದಲ್ಲಿ ಹಾಗೂ ಫೆ.27ರಂದು ಚಿಂತಾಮಣಿ ನಗರದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಅಹವಾಲು ಸಭೆಯನ್ನು ನಡೆಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ವಿಳಂಬ, ನಿರ್ಲಕ್ಷ್ಯ ಮಾಡುತ್ತಿದ್ದಲ್ಲಿ ಮತ್ತು ಹಣಕ್ಕೆ ಒತ್ತಾಯಿಸುತ್ತಿದ್ದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದು. ಸಭೆಯಲ್ಲಿ ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಲೋಕಾಯುಕ್ತ ಪೊಲೀಸ್ ಇನ್ಸೆಪೆಕ್ಟರ್ ಕೃಷ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement