'ಎರಡು ತಿಂಗಳಿಗೊಮ್ಮೆ ಆರೋಗ್ಯ ಪರೀಕ್ಷಿಸಿಕೊಳ್ಳಿ'
ಕೆಜಿಎಫ್: ಪೊಲೀಸರು ಕೆಲಸದ ಒತ್ತಡದಲ್ಲಿ ಸಿಲುಕಿದಾಗ ಅವರಿಗೆ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೊಳಗಾಗುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರುಗಳಾಗುವ ಸಾಧ್ಯತೆ ಇರುವುದರಿಂದ ಸಿಬ್ಬಂದಿ ಪ್ರತಿ 2 ತಿಂಗಳಿಗೊಮ್ಮೆ ತಮ್ಮ ಆರೋಗ್ಯ ಪರೀಕ್ಷಿಸಿಕೊಳ್ಳಬೇಕು ಎಂದು ಕೆಜಿಎಫ್ ಪೊಲೀಸ್ ರಕ್ಷಣಾಧಿಕಾರಿ ಡಾ. ರೋಹಿಣಿಕಟೋಚ್ ಸಫೇಟ್ ಹೇಳಿದ್ದಾರೆ.
ಬೆಂಗಳೂರಿನ ಅಪೊಲೋ ಆಸ್ಪತ್ರೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ವೇಳೆ ವಿವಿಧ ರೋಗಗಳ ತಜ್ಞರಿಂದ ಪೊಲೀಸ್ ಸಿಬ್ಬಂದಿಗೆ ಮತ್ತು ಕುಟುಂಬ ವರ್ಗದವರಿಗೆ ರಕ್ತದೊತ್ತಡ, ಕಣ್ಣು ಪರೀಕ್ಷೆ, ದೇಹ ಪರೀಕ್ಷೆ ಸೇರಿದಂತೆ ಇತರೇ ಕಾಯಿಲೆ ಪರೀಕ್ಷಿಸಿ ಚಿಕಿತ್ಸೆ ನೀಡಿದರು.
ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಕುಮಾರ್, ಪುಟ್ಟಮಾದಯ್ಯ, ಟಿ.ಸಿ. ವೆಂಕಟೇಶ್ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಕುಟುಂಬ ವರ್ಗ ಹಾಜರಿದ್ದರು.