ಗೌರಿಬಿದನೂರಿನಲ್ಲಿ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ
ಗೌರಿಬಿದನೂರು: ಕೇಂದ್ರದ ಬೆಲೆ ಏರಿಕೆ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಸಿಐಟಿಯು, ಸಿಪಿಐಎಂ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಪಟ್ಟಣದ ನಾಗಯ್ಯರೆಡ್ಡಿ ವೃತ್ತ, ಅಂಬೇಡ್ಕರ್ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟಿಸಿದರು. ದ್ವಿಚಕ್ರ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿ ಬಂದ್ಗೆ ಬೆಂಬಲಿಸಲು ಕೋರಿದರು.
ಬ್ಯಾಂಕ್, ಅಂಚೆ ಕಚೇರಿ, ಆಟೋಗಳು, ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳು, ಶಾಲೆಗಳು, ಅಂಗನವಾಡಿ ಕೇಂದ್ರ ಸೇರಿದಂತೆ ದಿನ ನಿತ್ಯದ ವಹಿವಾಟು ಸ್ಥಗಿತಗೊಂಡಿತ್ತು. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ ರಸ್ತೆಗಳು ಬಿಕೋ ಎನ್ನುತ್ತಿತ್ತು.
ಹಾಲು, ಔಷಧಿ, ಆಸ್ಪತ್ರೆ ಸೇವೆ, ಹೂವಿನ ಅಂಗಡಿಗಳು, ತರಕಾರಿ, ಹಣ್ಣಿನ ಅಂಗಡಿಗಳು ಕೈಗಾಡಿಗಳು ಎಂದಿನಂತೆ ವಹಿವಾಟು ನಡೆಸಿದವು.