ಕೋಲಾರ

ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಸಾವು

ಕೋಲಾರ: ನಗರದ ಮೆಕ್ಕೆ ವೃತ್ತದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಸುಮಾರು 10.15ರಲ್ಲಿ ನಡೆದಿದೆ.
ಕೋಲಾರ ತಾಲೂಕು ಹೂಹಳ್ಳಿ ಗ್ರಾಮದ ವಾಸಿಯಾದ ದೇವರಾಜ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೆಕ್ಕೆ ವೃತ್ತದ ಮುಳಬಾಗಿಲು ಕಡೆ ರಸ್ತೆ ಬದಿಯಲ್ಲಿ ನಿಂತಿದ್ದಾಗ ಆ ಸಮಯದಲ್ಲಿ ಬಂದ ಲಾರಿ ಚಾಲಕ ತನ್ನ ಲಾರಿಯನ್ನು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ದೇವರಾಜ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವುದಾಗಿ ಕೋಲಾರ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿ ಸಾವು: ರಾಷ್ಟ್ರೀಯ ಹೆದ್ದಾರಿ-4ರ ವಡಗೂರ್ ಗೇಟ್ ಬಳಿ ಅಪರಿಚಿತ ವ್ಯಕ್ತಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸದರಿ ವ್ಯಕ್ತಿ ತೀವ್ರ ಸ್ವರೂಪದ ಗಾಯಗಳಿಂದ ಮೃತಪಟ್ಟಿರುತ್ತಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್