ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಿಇಒ ವೆಂಕಟರಾಮರೆಡ್ಡಿ ವರ್ಗಾವಣೆ ಆದೇಶ ರದ್ದುಪಡಿಸಿ

Lingaraj Badiger
Updated On : 21 Feb 2013, 10:52 am

ಮಾಲೂರು:  ದಕ್ಷ ಹಾಗೂ ಕರ್ತವ್ಯ ನಿಷ್ಠೆಯ ಅಧಿಕಾರಿಯಾಗಿದ್ದ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮರೆಡ್ಡಿ ಅವರನ್ನು ರಾಜಕೀಯ ಉದ್ದೇಶದಿಂದ ವರ್ಗಾವಣೆ ಮಾಡಿರುವ ಶಾಸಕ ಕೃಷ್ಣಯ್ಯ ಶೆಟ್ಟಿ ವರ್ತನೆ ಖಂಡಿಸಿ ಸ್ಥಳೀಯ ಕರವೇ ಕಾರ್ಯಕರ್ತರು ಸೋಮವಾರ ಮಿನಿವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಈ ಸಂದರ್ಭ ಕರವೇ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಗೌಡ ಮಾತನಾಡಿ, ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ಶಿಕ್ಷಣಾಧಿಕಾರಿಗಳನ್ನು ತಮ್ಮ ಮಾತಿಗೆ ಮನ್ನಣೆ ನೀಡಲಿಲ್ಲ ಎಂಬ ಏಕೈಕ ಉದ್ದೇಶದಿಂದ ಶಾಸಕರು ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದರು.
ಬಿಇಒ ಅವರ ವರ್ಗಾವಣೆಯನ್ನು ಕರವೇ ಸಂಘಟನೆ ಖಂಡಿಸುತ್ತಿದೆ. ಈ ತಕ್ಷಣ ವರ್ಗಾವಣೆ ರದ್ದುಪಡಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಪ್ರಕಾಶ್, ಎಸ್.ಎಂ. ರಾಜು, ಚೆನ್ನಕೃಷ್ಣ, ಪುರಸಭೆ ಮಾಜಿ ಸದಸ್ಯ ರಾಮಚಂದ್ರ, ನಾಗಯಾದವ್, ನಾರಾಯಣಸ್ವಾಮಿ, ಚಂದ್ರು, ಶ್ಯಾಂ, ಮಂಜುನಾಥ್ ಗೌಡ, ಆಟೋ ಮಂಜು, ನಾರಾಯಣ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement