ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರೆಡ್ಡಿಗೊಲ್ಲವಾರಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಲಕ್ಷ್ಮಮ್ಮ (38) ಎಂದು ಗುರುತಿಸಲಾಗಿದೆ. ಗಂಡ, ಹೆಂಡತಿಯ ನಡುವೆ ನಡೆದ ಕ್ಷುಲ್ಲಕ ಗಲಾಟೆಗೆ ಬೇಸತ್ತ ಲಕ್ಷ್ಮಮ್ಮ ಮೈ ಮೇಲೆ ಸೀಮೆಎಣ್ಣೆಯನ್ನು ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸುವ ಮಧ್ಯ ಮಾರ್ಗದಲ್ಲಿ ಸಾವನ್ನಪ್ಪಿದ್ದಾಳೆ. ಪ್ರಕರಣವನ್ನು ಗ್ರಾಮಾಂತರ ಪೊಲೀಸರು ದಾಖಲಿಸಿ ಕೊಂಡಿದ್ದಾರೆ.