ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
ಕೆಜಿಎಫ್: ಜೀವನದಲ್ಲಿ ಜುಗುಪ್ಸೆಗೊಂಡ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಣ್ಣೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಂಜುನಾಥ್ ಅವರ ಪತ್ನಿ ಭಾಗ್ಯಮ್ಮ (30) ಮೃತಪಟ್ಟವರು. ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರು ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ. ಹೊಟ್ಟೆನೋವು ತಾಳದೇ ಇಲಿಗಳ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೇತಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅಕ್ರಮ ಮದ್ಯ: ಇಬ್ಬರ ಬಂಧನ
ಕೆಜಿಎಫ್: ಆಟೋದಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಅರುಣಕುಮಾರ್, ವೈದ್ಯೇಶ್ ಬಂಧಿತರು. ಬಂಗಾರಪೇಟೆಯಿಂದ ಕೆಜಿಎಫ್ ಕಡೆಗೆ ಬರುತ್ತಿದ್ದ ಆಟೋದ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದಾಗ 5795 ಮೌಲ್ಯದ 106 ವಿಸ್ಕಿ, ಬ್ರಾಂದಿ ಪ್ಯಾಕೆಟ್ ಸಾಗಿಸುತ್ತಿರುವುದು ಪತ್ತೆಯಾಗಿದೆ.