ಚುನಾವಣೆ: ಮದ್ಯಪಾನ ನಿಷೇಧ
ಕೋಲಾರ: ಜಿಲ್ಲೆಯ ಕೋಲಾರ ಮತ್ತು ಕೆಜಿಎಫ್ ನಗರಸಭೆ, ಬಂಗಾರಪೇಟೆ, ಮುಳಬಾಗಿಲು, ಮಾಲೂರು ಹಾಗೂ ಶ್ರೀನಿವಾಸಪುರ ಪುರಸಭೆಗಳಿಗೆ ಮಾ.7ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಹಾಗೂ ಮಾ.11ರಂದು ಮತ ಎಣಿಕೆಯು ನ್ಯಾಯಯುತವಾಗಿ ನಡೆಸುವ ಸಲುವಾಗಿ ಚುನಾವಣೆ ನಡೆಯುವ ಪ್ರದೇಶದಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಡಾ. ಡಿ.ಎಸ್. ವಿಶ್ವನಾಥ್ ಅಬಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣೆ ನಡೆಯುವ ದಿನ ಮತ್ತು ಮತ ಮಣಿಕೆಯ ದಿನದಂದು ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಮದ್ಯಪಾನ ನಿಷೇಧಿಸಬೇಕೆಂದು ಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.