ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮಾನವ ಕಳ್ಳ ಸಾಗಣೆ ತಡೆಗೆ ಬದ್ಧ

Parashurama
Updated On : 1 Mar 2013, 12:09 pm

ಕೆಜಿಎಫ್: ಇತ್ತೀಚಿನ ದಿನಗಳಲ್ಲಿ ಮಕ್ಕಳು ಮತ್ತು ಮಹಿಳೆಯರ ಕಳ್ಳಸಾಗಾಣೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ವ್ಯವಸ್ಥಿತ ಅಪರಾಧ ಪ್ರಕರಣ ತಡೆಗಟ್ಟಲು ಕರ್ನಾಟಕ ಪೊಲೀಸ್ ಇಲಾಖೆ ಸಮರ್ಥವಾಗಿದೆ
ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಲಾಲ್ ರುಕುಮ್ ಪಚಾವೋ ತಿಳಿಸಿದರು.
ಇಲ್ಲಿನ ಬೆಮೆಲ್‌ನಗರದ ಬೆಮೆಲ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಲಯ ಮಟ್ಟದ ಮಾನವ ಕಳ್ಳಸಾಗಾಣೆ, ಮಕ್ಕಳು ಮತ್ತು ಮಹಿಳೆಯರ ನಾಪತ್ತೆ ಕುರಿತ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಕಳ್ಳಸಾಗಾಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನು ಜಾರಿಯಾಗಿದ್ದರೂ, ಮನುಷ್ಯನ ಆರ್ಥಿಕ ಹಾಗೂ ಸಮಾಜದ ಪರಿಸ್ಥಿತಿ ಬಂಡವಾಳ ಮಾಡಿಕೊಳ್ಳುವ ವ್ಯವಸ್ಥಿತ ಜಾಲ ಇಂತಹ ಅಪರಾಧ ಪ್ರಕರಣ ನಡೆಸುತ್ತಿದ್ದಾರೆ. ಈ ಪ್ರಕರಣಗಳನ್ನು ತಡೆಗಟ್ಟಲು ಸಾರ್ವಜನಿಕರು ಸೇರಿದಂತೆ ಸಂಘ ಸಂಸ್ಥೆಗಳು ಹಾಗಕೂ ಎನ್‌ಜಿಒ ಸಂಸ್ಥೆಗಳ ಸಹಕಾರ ಪ್ರಮುಖ ಪಾತ್ರವಹಿಸಲಿದೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.
ಸಹಕಾರ ಅಗತ್ಯ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಲವು ಮಾನವ ಕಳ್ಳಸಾಗಾಣೆ ಪ್ರಕರಣದಲ್ಲಿ ಹಲವು ಜಾಲದ ವ್ಯಕ್ತಿಗಳನ್ನು ಬಂಧಿಸಿದ್ದು ಮತ್ತು ಮಕ್ಕಳ ಹಾಗೂ ಮಹಿಳೆಯರು ಕಾಣೆಯಾದ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತಿದ್ದು, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಹಲವು ಪ್ರಕರಣ ಬಯಲಿಗೆ: ಮಾನವ ಕಳ್ಳಸಾಗಾಣೆ ಪ್ರಕರಣಗಳಲ್ಲಿ ಪ್ರಮುಖವಾಗಿ ಬಡ ಕುಟುಂಬದ ಮಹಿಳೆಯರನ್ನು ವೇಶ್ಯಾವಾಟಿಕೆ ವೃತ್ತಿಗೆ ದೂಡಲಾಗುತ್ತಿದೆ ಹಾಗೂ ಮಕ್ಕಳನ್ನು ಜೀತ ಪದ್ಧತಿ, ಭಿಕ್ಷಾಟನೆ, ಮನುಷ್ಯನ ಅಂಗಾಂಗಳ ಮಾರಾಟಕ್ಕೆ ಇಂತಹ ವ್ಯವಸ್ಥಿತ ಜಾಲದ ಪತ್ತೆಗೆ ಇಲಾಖೆ ಕ್ರಮಕ್ಕೆ ಮುಂದಾಗಿದ್ದು, ಅಮಾಯಕ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ಜಾಲದ ಬಗ್ಗೆ ಹಲವು ರಾಜ್ಯಗಳ ಪೊಲೀಸ್ ಇಲಾಖೆಯೊಂದಿಗೆ ಅಗತ್ಯ ಮಾಹಿತಿ ವಿನಮಯ ಮೂಲಕ ಪ್ರಕರಣದ ಬಯಲಿಗೆ ಇಲಾಖೆ ಮುಂದಾಗಿದೆ ಎಂದರು.
ಇದೇ ವೇಳೆ ಕೇಂದ್ರ ವಲಯ ಐಜಿಪಿ ಅಮರ್‌ಕುಮಾರ್ ಪಾಂಡೆ ಮಾತನಾಡಿ ಮಾನವ ಕಳ್ಳಸಾಗಾಣೆ ವ್ಯವಸ್ಥಿತ ಜಾಲದ ಕೆಲ ವ್ಯಕ್ತಿಗಳು ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಮಹಿಳೆಯರನ್ನು ಮತ್ತು ಮಕ್ಕಳನ್ನು ವಿದೇಶಗಳಿಗೆ,ಉದ್ಯೋಗದ ಆಮೀಷ ನೀಡಿ ಮಾರಾಟ ಮಾಡಲಾಗುತ್ತಿದೆ ಇಂತಹ ಅಪರಾಧ ಕೃತ್ಯ ತಡೆಗಟ್ಟಲು ಪೊಲೀಸ್ ಇಲಾಖೆ ಎಲ್ಲಾ ರೀತಿಯ ಕ್ರಮಕ್ಕೆ ಮುಂದಾಗಲಿದೆ ಎಂದರು.
ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಖ್ಯಸ್ಥರಾದ ಮೀರಾಜೈನ್, ಜೆ.ಎನ್.ದೇಸಾಯಿ, ಚಿಂತಾಮಣಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಮೇಶ್‌ಭಾನೋತ್ ಮತ್ತು ಪಿಎಸ್‌ಐಗಳಾದ ಸಿದ್ದರಾಜು, ಎಸ್.ಎ.ಗಣಿಗೇರೆ ಮತ್ತಿತರರು ಮಾತನಾಡಿದರು.  
ಕೇಂದ್ರ ವಲಯ ವ್ಯಾಪ್ತಿಯ ಕೋಲಾರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೆಜಿಎಫ್ ವ್ಯಾಪ್ತಿಯ ಹಿರಿಯ ಅಧಿಕಾರಿಗಳು, ವೃತ್ತ ನಿರೀಕ್ಷಕರು, ಪಿಎಸ್‌ಐ, ಸಿಬ್ಬಂದಿ, ಕೆಜಿಎಫ್ ಪೊಲೀಸ್ ರಕ್ಷಣಾಧಿಕಾರಿ ಡಾ.ರೋಹಿಣಿ ಕಟೋಚ್ ಸಫೆಟ್ ಹಾಗೂ ಕೋಲಾರ ಪೊಲೀಸ್ ರಕ್ಷಣಾಧಿಕಾರಿ ರಾಮನಿವಾಸ್ ಸಫೆಟ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments