ಆಧಾರ್ ಕೇಂದ್ರಕ್ಕೆ ಚಾಲನೆ
ಮುಳಬಾಗಲು: ಪಟ್ಟಣದಲ್ಲಿ ಆಧಾರ್ ಕಾರ್ಡ್ ಪ್ರಕ್ರಿಯೆ ತ್ವರಿತಗೊಳಿಸುವ ಸಲುವಾಗಿ ಎರಡನೇ ಆಧಾರ್ ನೋಂದಣಿ ಕೇಂದ್ರವನ್ನು ತಹಸೀಲ್ದಾರ್ ಎಂ.ನಂಜಯ್ಯ ಚಾಲನೆ ನೀಡಿದರು. ಕೇಂದ್ರಕ್ಕೆ 10ರಿಂದ 15 ವಾರ್ಡ್ಗಳವರು ನೋಂದಾಯಿಸಿಕೊಳ್ಳಬೇಕಿದೆ. ಅಗತ್ಯ ಬಿದ್ದರೆ ಇನ್ನು ಹೆಚ್ಚಿನ ಆಧಾರ್ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ಹೇಳಿದರು. ಅಪರ ತಹಸೀಲ್ದಾರ್ ಡಿ.ವಿ. ರಾಮಮೂರ್ತಿ ಮಾತನಾಡಿ, ಮುಂದಿನ ದಿನಗಳಲ್ಲಿ ಆಧಾರ್ ಕಾರ್ಡ್ ಎಲ್ಲಾ ಯೋಜನೆಗಳಿಗೂ ಅಗತ್ಯವಾಗಿರುತ್ತದೆಂದು ಹೇಳಿದರು. ಪ್ರತಿಯೊಬ್ಬರು ಆಧಾರ್ ಅಡಿಯಲ್ಲಿ ನೋಂದಾಯಿಸಿಕೊಳ್ಳಲು ಕೋರಿದರು. ಪುರಸಭೆ ಸದಸ್ಯ ಸೈಯದ್ ನಯಾಜ್, ನೋಡಲ್ ಅಧಿಕಾರಿ ವಿ.ಸೌಮ್ಯ ಮುಂತಾದವರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.