'ಕುಮಾರಸ್ವಾಮಿ ಸಿಎಂ ಆಗಿದ್ದಾಗ ನನ್ನ ಆಸ್ತಿ ಪತ್ತೆಗೆ ತನಿಖೆ ಮಾಡಿಸಿದ್ರು'
ಕೋಲಾರ: ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ದಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರ ಪರವಾಗಿ ನಾನು ಕೆಲಸ ಮಾಡಿದ್ದರಿಂದ ಕುಪಿತರಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ನನ್ನ ಆಸ್ತಿ ಪತ್ತೆಗಾಗಿ ಅಧಿಕಾರಿಗಳಿಂದ ತನಿಖೆ ಮಾಡಿಸಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ವರ್ತೂರ್ ಪ್ರಕಾಶ್ ಆರೋಪಿಸಿದರು.
ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಾಗ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದರು. ನಾನು ಸಿದ್ದರಾಮಯ್ಯನವರ ಪರವಾಗಿ ಕೆಲಸ ಮಾಡಿದ್ದೆ, ಆ ಸಂದರ್ಭದಲ್ಲೇ ನನ್ನ ಆಸ್ತಿ ಪತ್ತೆಗಾಗಿ ಗ್ರಾಮ ಲೆಕ್ಕಾಧಿಕಾರಿ, ತಹಸೀಲ್ದಾರ್ ಅವರಿಗೆ ಆದೇಶ ನೀಡಿದ್ದರಾದರೂ ಯಾವುದೇ ಅಕ್ರಮ ಆಸ್ತಿ ಪತ್ತೆ ಮಾಡಲು ಇವರಿಂದ ಸಾಧ್ಯವಾಗಲಿಲ್ಲವೆಂದು ಹೇಳಿದರು. ಹೇಗಾದರೂ ಮಾಡಿ ನನ್ನನ್ನು ಲೋಕಾಯುಕ್ತರಿಗೆ ಹಿಡಿದುಕೊಡಬೇಕೆಂಬುದು ಕುಮಾರಸ್ವಾಮಿ ಅವರ ಉದ್ದೇಶವಾಗಿತ್ತು. ಸದಾನಂದಗೌಡರು ಮುಖ್ಯಮಂತ್ರಿ ಆಗಿದ್ದಾಗಲೂ ಇದೇ ಕುಮಾರಸ್ವಾಮಿ ಲೋಕಾಯುಕ್ತರಿಗೆ ಯಾರಿಂದಲೋ ದೂರು ಕೊಡಿಸಿ ಕೇಸು ಹಾಕಿಸಿದ್ರು ಎಂದು ಆರೋಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.