ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಚುನಾವಣಾ ಆಯೋಗದಿಂದ ಉತ್ತಮ ಕಾರ್ಯ'

Parashurama
Updated On : 26 Jan 2013, 12:47 pm

ಮುಳಬಾಗಲು: ಚುನಾವಣೆ ಆಯೋಗವು ಸ್ವತಂತ್ರ ಸಂಸ್ಥೆಯಾಗಿದ್ದು, ಚುನಾವಣೆ ಪ್ರಕ್ರಿಯೆ ಬಗ್ಗೆ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಅಲಂಗೂರು ಮಂಜುನಾಥ್ ಹೇಳಿದರು.
ಪಟ್ಟಣದ ಮಿನಿವಿಧಾನಸೌಧದಲ್ಲಿ ಶುಕ್ರವಾರ ನಡೆದ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಚುನಾವಣಾ ಆಯೋಗವು 2011ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ತಹಸೀಲ್ದಾರ್ ಎಚ್.ನಂಜಯ್ಯ, ಚುನಾವಣೆ ಶಿರಸ್ತೇದಾರ್ ಸೂಲಯ್ಯ, ದತ್ತಾತ್ರೇಯ, ಪುರಸಭೆ ಉಪಾಧ್ಯಕ್ಷೆ ಲಕ್ಷ್ಮಿದೇವಮ್ಮ, ಸಿಂಧೂ ಮತ್ತು ಚುನಾವಣೆ ಬೂತ್ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ನೂತನ ಮತದಾರರಿಗೆ ಏಪಿಕ್ ಕಾರ್ಡ್ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments